ADVERTISEMENT

ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಮಿತ್ ಶಾ ಸಭೆ

ಪಿಟಿಐ
Published 7 ಅಕ್ಟೋಬರ್ 2024, 7:13 IST
Last Updated 7 ಅಕ್ಟೋಬರ್ 2024, 7:13 IST
<div class="paragraphs"><p>ಅಮಿತ್ ಶಾ </p></div>

ಅಮಿತ್ ಶಾ

   

–ಪಿಟಿಐ ಚಿತ್ರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಕ್ಸಲ್‌ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ್ದಾರೆ.

ADVERTISEMENT

ಛತ್ತೀಸಗಢದ ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿನ ಬಸ್ತರ್‌ ಅರಣ್ಯ ಪ್ರದೇಶದಲ್ಲಿ ಗುರುವಾರ ಮತ್ತು ಶುಕ್ರವಾರ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಪಡೆಗಳು, 31 ನಕ್ಸಲರನ್ನು ಹತ್ಯೆ ಮಾಡಿದ್ದವು. ಇದರ ಬೆನ್ನಲ್ಲೇ, ಅಮಿತ್‌ ಶಾ ಸಭೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸಗಢ, ಒಡಿಶಾ, ತೆಲಂಗಾಣ, ಮಹಾರಾಷ್ಟ್ರ, ಜಾರ್ಖಂಡ್‌, ಬಿಹಾರ, ಆಂಧ್ರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ನಕ್ಸಲರ ಉಪಟಳವಿದೆ. ಈ ರಾಜ್ಯಗಳೊಂದಿಗೆ ನಿಕಟ ಸಂಪರ್ಕದಲ್ಲಿರುವ ಕೇಂದ್ರ ಸಚಿವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉನ್ನತಾಧಿಕಾರಿಗಳು, ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆ (ಸಿಎಪಿಎಫ್‌ಎಸ್‌) ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ನಕ್ಸಲ್‌ ವಿರೋಧಿ ಕಾರ್ಯಾಚರಣೆ ಹಾಗೂ ಸಂತ್ರಸ್ತ ಪ್ರದೇಶಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

ಮೋದಿ ಸರ್ಕಾರದ ಕಾರ್ಯತಂತ್ರಗಳಿಂದಾಗಿ, ಎಡಪಂಥೀಯ ಉಗ್ರವಾದವು ಶೇ 72 ರಷ್ಟು ಕುಸಿದಿದೆ. ನಕ್ಸಲರು ಹೋರಾಟದ ಕೊನೇ ಹಂತದಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.