ತಿರುಪತಿ: ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು (ಗುರುವಾರ) ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.
ತಿರುಮಲದಲ್ಲಿರುವ ಪ್ರಸಿದ್ಧ ವೆಂಕಟೇಶ್ವರ ದೇವಾಲಯಕ್ಕೆ ನಿತಿನ್ ಗಡ್ಕರಿ ಭೇಟಿ ನೀಡಿರುವ ವಿಡಿಯೊವನ್ನು ಸುದ್ದಿಸಂಸ್ಥೆ ’ಎಎನ್ಐ‘ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡಿದೆ.
ತಿರುಪತಿ ವೆಂಕಟೇಶ್ವರನ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಜನರ ಯೋಗಕ್ಷೇಮ, ಉತ್ತಮ ಆರೋಗ್ಯ ಹಾಗೂ ದೇಶದ ಸಮೃದ್ದಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ. ರಾಷ್ಟ್ರದ ಅಭಿವೃದ್ದಿಗಾಗಿ ಮತ್ತಷ್ಟು ಸ್ಫೂರ್ತಿದಾಯಕವಾಗಿ ಕೆಲಸ ಮಾಡಲು ಶಕ್ತಿ ನೀಡುವಂತೆ ದೇವರಲ್ಲಿ ಕೋರಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.