ADVERTISEMENT

ರಾಹುಲ್‌ ಗಾಂಧಿ ವಿರುದ್ಧ ಚುನಾವಣಾ ಆಗೋಗಕ್ಕೆ ದೂರು: ಅಠಾವಳೆ

​ಪ್ರಜಾವಾಣಿ ವಾರ್ತೆ
Published 9 ಮೇ 2024, 15:20 IST
Last Updated 9 ಮೇ 2024, 15:20 IST
ರಾಮದಾಸ್‌ ಅಠಾವಳೆ
ರಾಮದಾಸ್‌ ಅಠಾವಳೆ   

ಮುಂಬೈ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ‘ಬಿಜೆಪಿಯು ದೇಶದ ಸಂವಿಧಾನವನ್ನು ಬದಲಿಸಲಿದೆ’ ಎಂಬ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ರಾಜ್ಯ ಖಾತೆ ಸಚಿವ ರಾಮದಾಸ್‌ ಅಠಾವಳೆ ತಿಳಿಸಿದರು.

‘ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ’ ಎಂದು ರಾಹುಲ್‌ ಗಾಂಧಿ ಪದೇ ಪದೇ ಹೇಳುತ್ತಿದ್ದಾರೆ. ಅವರು ಇಂಥ ಹೇಳಿಕೆ ನೀಡದಂತೆ ತಿಳಿಸಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT