ADVERTISEMENT

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೋವಿಡ್‌ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಅಕ್ಟೋಬರ್ 2020, 14:42 IST
Last Updated 28 ಅಕ್ಟೋಬರ್ 2020, 14:42 IST
ಕೇಂದ್ರ ಸಚಿವೆ ಸ್ಮೃತಿ ಇರಾನಿ 
ಕೇಂದ್ರ ಸಚಿವೆ ಸ್ಮೃತಿ ಇರಾನಿ    

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ವಿಚಾರವನ್ನು ಟ್ವೀಟ್‌ ಮೂಲಕ ತಿಳಿಸಿರುವ ಅವರು, 'ನನಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು' ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಸಚಿವರಾದ ಅಮಿತ್‌ ಶಾ, ನಿತೀನ್‌ ಗಡ್ಕರಿ, ದರ್ಮೇಂದ್ರ ಪ್ರಧಾನ್‌ ಅವರಿಗೆ ಈ ಹಿಂದೆ ಕೋವಿಡ್‌ ಇರುವುದು ದೃಢಪಟ್ಟಿತ್ತು.

ADVERTISEMENT

ದೇಶದಾದ್ಯಂತ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 79,90,322 ತಲುಪಿದ್ದು, ಸೋಂಕಿನಿಂದ ಈವರೆಗೂ 1,20,010 ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.