ADVERTISEMENT

ಸಿಯುಇಟಿ | ಖಾಲಿ ಸೀಟುಗಳಿಗೆ ವಿ.ವಿಗಳೇ ಪ್ರವೇಶ ಪರೀಕ್ಷೆ ನಡೆಸಬಹುದು: ಯುಜಿಸಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 14:25 IST
Last Updated 1 ಆಗಸ್ಟ್ 2024, 14:25 IST
<div class="paragraphs"><p>ಯುಜಿಸಿ ಅಧ್ಯಕ್ಷ ಎಂ. ಜಗದೀಶ್ ಕುಮಾರ್‌</p></div>

ಯುಜಿಸಿ ಅಧ್ಯಕ್ಷ ಎಂ. ಜಗದೀಶ್ ಕುಮಾರ್‌

   

ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಯುಇಟಿ) ಮೂಲಕ ಹಂಚಿಕೆ ಮಾಡಿದ ಬಳಿಕ, ಖಾಲಿ ಉಳಿಯುವ ಸೀಟುಗಳ ಭರ್ತಿಗೆ ವಿಶ್ವವಿದ್ಯಾಲಯಗಳು ತಮ್ಮದೇ ಆದ ಪ್ರವೇಶ ಪರೀಕ್ಷೆ ನಡೆಸಬಹುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೇಳಿದೆ. 

ಮೂರರಿಂದ ನಾಲ್ಕು ಸುತ್ತಿನ ಕೌನ್ಸಲಿಂಗ್‌ ಬಳಿಕವೂ ಕೆಲ ವಿ.ವಿಗಳಲ್ಲಿ ಸೀಟುಗಳು ಖಾಲಿ ಇರುವುದು ಯುಜಿಸಿ ಗಮನಕ್ಕೆ ಬಂದಿದೆ. ಶೈಕ್ಷಣಿಕ ವರ್ಷ ಪೂರ್ತಿ ಸೀಟುಗಳನ್ನು ಖಾಲಿ ಇಡುವುದು ಸರಿಯಲ್ಲ. ಇದರಿಂದ ವಿ.ವಿಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಬಯಸುವ ಅನೇಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನಿರಾಕರಿಸಿದಂತಾಗುತ್ತದೆ ಎಂದು ತಿಳಿಸಿದೆ.

ADVERTISEMENT

ಕೋರ್ಸ್‌ಗಳಿಗೆ ದಾಖಲಾತಿ ಮಾಡಿಕೊಳ್ಳುವಾಗ ಪ್ರವೇಶ ಪರೀಕ್ಷೆ ಅಥವಾ ಅರ್ಹತಾ ಪರೀಕ್ಷೆಯ ಅಂಕಗಳೇ ಮಾನದಂಡವಾಗಿರುತ್ತದೆ ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೀಶ್ ಕುಮಾರ್‌ ಅವರು ಗುರುವಾರ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.