ADVERTISEMENT

ಜಮ್ಮು ಮತ್ತು ಕಾಶ್ಮೀರ | ಭದ್ರತೆ ಬಗ್ಗೆ ಸುಳ್ಳು ಸುದ್ದಿ: ಪೊಲೀಸರ ಸ್ಪಷ್ಟನೆ

ಪಿಟಿಐ
Published 15 ಜೂನ್ 2024, 11:02 IST
Last Updated 15 ಜೂನ್ 2024, 11:02 IST
<div class="paragraphs"><p>ಸಾಂಕೇತಿಕ ಚಿತ್ರ&nbsp;</p></div>

ಸಾಂಕೇತಿಕ ಚಿತ್ರ 

   

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡದ ದಾಳಿಯ ನಂತರ ಬೊಲೆರೊ ವಾಹನವೊಂದರಲ್ಲಿ ಸಶಸ್ತ್ರಗಳನ್ನು ಸಾಗಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಈ ಸಂಬಂಧ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಅಪರಿಚಿತ ವ್ಯಕ್ತಿಯೊಬ್ಬರು ಸಶಸ್ತ್ರಗಳನ್ನು ಅನುಮಾನಾಸ್ಪದ ವಾಹನದಲ್ಲಿ ಸಾಗಿಸುತ್ತಿದ್ದರೂ ಭದ್ರತಾ ಪಡೆಯು ತಪಾಸಣೆ ನಡೆಸಿಲ್ಲ ಎಂದು ಆರೋಪಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊಗಳು ಹರಿದಾಡಿದ್ದವು.

ADVERTISEMENT

ವಾಹನದಲ್ಲಿ ಸಿಎಪಿಎಫ್ ಸಿಬ್ಬಂದಿಯೇ ಸಶಸ್ತ್ರಗಳನ್ನು ಸಾಗಿಸುತ್ತಿದ್ದರು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸಶಸ್ತ್ರಗಳನ್ನು ಸಾಗಿಸುವ ವಾಹನದ ನಂಬರ್‌ ಪ್ಲೇಟ್‌ ಅನ್ನು ಮುಚ್ಚಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಭದ್ರತೆಯ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಜನರಲ್ಲಿ ಆತಂಕ ಮೂಡಿಸಲಾಗುತ್ತಿದೆ. ಜನರು ಇಂತಹ ವಂದತಿಗಳಿಗೆ ಕಿವಿಕೊಡಬಾರದು ಎಂದು ಪೊಲೀಸರು ಹೇಳಿದ್ದಾರೆ.

ರಿಯಾಸಿ ದಾಳಿಯ ನಂತರ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಚಲನವಲನಗಳ ಬಗ್ಗೆ ಜನರು ಗಮನಹರಿಸಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದು. 33 ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.