ADVERTISEMENT

ಉತ್ತರ ಪ್ರದೇಶ: ₹ 15 ಕೋಟಿ ಮೌಲ್ಯದ ಮಾರ್ಫಿನ್ ವಶ, ಮೂವರ ಬಂಧನ

ಪಿಟಿಐ
Published 1 ಜೂನ್ 2021, 13:49 IST
Last Updated 1 ಜೂನ್ 2021, 13:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾರಬಂಕಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು ₹ 15 ಕೋಟಿ ಮೌಲ್ಯ ಹೊಂದಿರುವ ಮಾರ್ಫಿನ್ ಮಾದಕ ವಸ್ತುವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳವಾರ ಇಲ್ಲಿ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮೊಹಮ್ಮದ್‌ಪುರ್ ಖಲಾ ಪ್ರದೇಶದ ದಾದಾಬ್ ಕ್ರಾಸಿಂಗ್ ಬಳಿ 110 ಗ್ರಾಂ ಮಾರ್ಫಿನ್‌ನೊಂದಿಗೆ ಆರೋಪಿಗಳಾದ ಅವಧೇಶ್‌ ಕುಮಾರ್, ಸದ್ದಾಂ, ಕೃಷ್ಣಕುಮಾರ್ ಮಿಶ್ರಾ ಎಂಬುವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯಿದೆ 1985ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜೈಲಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

‘ಗ್ಯಾಂಗ್‌ನ ಕಿಂಗ್‌ಪಿನ್ ಆಗಿದ್ದ ಅವಧೇಶ್ ನೇತೃತ್ವದಲ್ಲಿ ಆರೋಪಿಗಳು ಜಾರ್ಖಂಡ್‌ನಿಂದ ಉತ್ತರ ಪ್ರದೇಶ, ದೆಹಲಿ, ಹರಿಯಾಣ ಮತ್ತು ಪಂಜಾಬ್‌ ರಾಜ್ಯಗಳಿಗೆ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು’ ಎಂಬ ಅಂಶ ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.