ADVERTISEMENT

ಕಾಂಚನ್‌ಜುಂಗಾ ರೈಲು ಅಪಘಾತ: ಸಂತಾಪ ಸೂಚಿಸಿದ ಸಿಎಂ ಯೋಗಿ ಆದಿತ್ಯನಾಥ

ಪಿಟಿಐ
Published 17 ಜೂನ್ 2024, 12:33 IST
Last Updated 17 ಜೂನ್ 2024, 12:33 IST
<div class="paragraphs"><p>ಯೋಗಿ ಆದಿತ್ಯನಾಥ</p></div>

ಯೋಗಿ ಆದಿತ್ಯನಾಥ

   

ಲಖನೌ: ಪಶ್ಚಿಮ ಬಂಗಾಳದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪಶ್ಚಿಮ ಬಂಗಾಳದಲ್ಲಿ ನಡೆದ ರೈಲು ಅಪಘಾತದಲ್ಲಿ ಹಲವು ಮಂದಿ ಪ್ರಾಣ ಕಳೆದುಕೊಂಡಿರುವ ವಿಷಯ ತಿಳಿದು ದುಃಖವಾಗಿದೆ. ಮೃತ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಕೊಳ್ಳಲಿ ಎಂದು ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳದ ಜಲಪಾಯ್ಗುಡಿ ರೈಲು ನಿಲ್ದಾಣದ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ 15 ಜನ ಮೃತಪಟ್ಟು, 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ರೈಲ್ವೆ ಮಂಡಳಿಯ ಅಧಿಕಾರಿಗಳು ಸಿಗ್ನಲ್‌ನಲ್ಲಿಯ ತಾಂತ್ರಿಕ ದೋಷದಿಂದ ಈ ಅಪಘಾತ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಕಂಡುಕೊಂಡಿದ್ದಾರೆ.

ಈ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.