ಲಖನೌ: ಸಾಮಾಜಿಕ ಜಾಲತಾಣದ ಮೂಲಕ ಸ್ನೇಹ ಬೆಳಸಿದ್ದ ಮುಸ್ಲಿಂ ಯುವಕನೊಬ್ಬ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದಲಿತ ಯುವತಿಯೊಬ್ಬರು ಆರೋಪಿಸಿದ್ದಾರೆ.
ಸಂತಸ್ತ ಯುವತಿ ದೂರು ಆಧರಿಸಿ ತನಿಖೆ ನಡೆಸುತ್ತಿರುವ ಪೊಲೀಸರು, ‘ಮದುವೆ ಆಗುವುದಾಗಿ ನಂಬಿಸಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬಸ್ಥರನ್ನು ಬಲವಂತದಿಂದ ಮತಾಂತರ ಮಾಡಿಸಿರುವುದು ತಿಳಿದುಬಂದಿದೆ. ಹಾಗಾಗಿ ಆರೋಪಿ ಮತ್ತು ಆತನ ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಆರೋಪಿ ನನ್ನನ್ನು ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದ. ಜತೆಗೆ, ತವರು ಮನೆಯಿಂದ ₹ 7 ಲಕ್ಷ ಹಣ ತರುವಂತೆ ಆತ ಮತ್ತು ಆತನ ಕುಟುಂಬಸ್ಥರು ಹಿಂಸಿಸುತ್ತಿದ್ದರು. ನನ್ನ ಮೇಲೆ ಹಲ್ಲೆ ನಡೆಸಿ ಏ.10 ರಂದು ಮನೆಯಿಂದ ಹೊರಹಾಕಿದ್ದಾರೆ ಎಂದು ಯುವತಿ ಪೊಲೀಸರಿಗೆ ವಿವರಿಸಿದ್ದಾಳೆ.
ಪಿಲಿಭಿತ್ ಜಿಲ್ಲೆಯ ಯುವಕ ಸುಮಾರು ಐದು ವರ್ಷಗಳ ಹಿಂದೆ ತನ್ನ ಸಹೋದರಿಯ ಫೇಸ್‌ಬುಕ್ ಖಾತೆಯ ಮೂಲಕ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ತಿಳಿಸಿದ್ದಾರೆ.
ಪರಿಚಯವಾದ ಬಳಿಕ ಆರೋಪಿಯು ಯುವತಿಯನ್ನು ರಾಯ್ ಬರೇಲಿಯ ಮಾಲ್‌ಗೆ ಕರೆದೊಯ್ದಿದ್ದ. ನಂತರ ಆತನ ಮನೆಗೆ ಕರೆದುಕೊಂಡು ಹೋಗಿ ಕುಟುಂಬಸ್ಥರನ್ನು ಪರಿಚಯಿಸಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಮುಸ್ಲಿಂ ಸಮುದಾಯಕ್ಕೆ ಮತಾಂತರವಾಗಲು ನಿರಾಕರಿಸಿದಾಗ ಜೊತೆಗಿದ್ದ ವಿಡಿಯೊಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2020ರ ಸೆಷ್ಟೆಂಬರ್‌ನಲ್ಲಿ ಆಕೆ ಮತ್ತು ಆಕೆಯ ಕುಟುಂಬಸ್ಥರನ್ನು ಬಲವಂತವಾಗಿ ಮತಾಂತರ ಮಾಡಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಹೇಳಿದ್ದಾರೆ.
ಇದನ್ನೂ ಓದಿ... ಕನ್ನಡ ಆಯ್ತು, ಈಗ ಡಾ. ರಾಜ್ ವಿಚಾರದಲ್ಲಿ ಪ್ರಮಾದ!
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.