ADVERTISEMENT

ಉತ್ತರ ಪ್ರದೇಶದಲ್ಲಿ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ: ಏಳು ಮಂದಿಯ ಬಂಧನ

ಪಿಟಿಐ
Published 1 ಆಗಸ್ಟ್ 2022, 5:26 IST
Last Updated 1 ಆಗಸ್ಟ್ 2022, 5:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮುಜಪ್ಫರನಗರ: 30 ವರ್ಷದ ದಲಿತ ಮಹಿಳೆಗೆ ಬಂದೂಕು ತೋರಿಸಿ ಬೆದರಿಕೆಯೊಡ್ಡಿರುವ ಏಳು ಮಂದಿ ದುಷ್ಕರ್ಮಿಗಳು ಆಕೆಯನ್ನು ಬೆತ್ತಲುಗೊಳಿಸಿ, ವಿಡಿಯೊ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮುಜಪ್ಫರನಗರ ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ ಮುಜಪ್ಫರನಗರ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಹುಲ್ಲು ಕತ್ತರಿಸಲು ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಅಲ್ಲಿದ್ದ ಏಳು ಆರೋಪಿಗಳು ನನಗೆ ಲೈಂಗಿಕ ಕಿರುಕುಳ ನೀಡಿದ್ದರು. ಬಂದೂಕು ತೋರಿಸಿ ಬಟ್ಟೆಗಳನ್ನು ತೆಗೆಸಿ, ನಂತರ ವಡಿಯೊ ಮಾಡಿದರು’ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಐಪಿಸಿಯ ಸೆಕ್ಷನ್ 354 ಬಿ ಮತ್ತು 506, ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಏಳು ಜನರನ್ನು ಬಂಧಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಎಸ್‌ಎಚ್‌ಒ ಆನಂದ್ ದೇವ್ ಮಿಶ್ರಾ ಹೇಳಿದ್ದಾರೆ.

ಆರೋಪಿಗಳನ್ನು ಅನುಜ್, ಕುಲದೀಪ್, ಅಂಕಿತ್, ರವಿ, ರಿಜ್ವಾನ್, ಚೋಟಾ ಮತ್ತು ಅಬ್ದುಲ್ ಎಂದು ಪೊಲೀಸರು ಗುರುತಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.