ADVERTISEMENT

25 ಮಹಿಳೆಯರನ್ನು ರೇಪ್ ಮಾಡಿ ಕೊಂದಿರುವೆ,ಮುಂದೆ ನೀನೇ: ಶಿಕ್ಷಕಿಗೆ ಬಿಷ್ಣೋಯಿ ಸಹಚರ

ಪಿಟಿಐ
Published 13 ನವೆಂಬರ್ 2024, 13:33 IST
Last Updated 13 ನವೆಂಬರ್ 2024, 13:33 IST
   

ಬಸ್ತಿ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಗುಂಪಿನ ವ್ಯಕ್ತಿಯೊಬ್ಬರು ನನ್ನ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಬಸ್ತಿಯ ನೃತ್ಯ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಲಾರೆನ್ಸ್ ಬಿಷ್ಣೋಯಿ ಗುಂಪಿನವನೆಂದು ಹೇಳಿಕೊಂಡ ಒಬ್ಬ ವ್ಯಕ್ತಿ ದೂರವಾಣಿ ಕರೆ ಮೂಲಕ ಬೆದರಿಕೆ ಹಾಕುತ್ತಿದ್ದು, ಈಗಾಗಲೇ 25 ಮಹಿಳೆಯರನ್ನು ರೇಪ್ ಮಾಡಿ ಕೊಂದಿದ್ದೇನೆ. ಮುಂದಿನ ಸರದಿ ನಿನ್ನದೇ ಎಂದು ಹೇಳುತ್ತಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ನೃತ್ಯ ಶಿಕ್ಷಕಿ ಬಸ್ತಿ ಸದರ್ ಕೊತ್ವಾಲಿ ಪ್ರದೇಶದಲ್ಲಿ ಅತ್ಯಂತ ಹೆಸರುವಾಸಿಯಾಗಿದ್ದು, ನೃತ್ಯಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಯೂಟ್ಯೂಬ್ ಟ್ಯುಟೋರಿಯಲ್‌ನಲ್ಲಿ ಪ್ರಸಾರ ಮಾಡುತ್ತಿರುತ್ತಾರೆ.

ADVERTISEMENT

ದುಷ್ಕರ್ಮಿಯು ಹಲವು ಮೊಬೈಲ್ ನಂಬರ್‌ಗಳನ್ನು ಬಳಸಿ ಕರೆ ಮಾಡುತ್ತಿದ್ದಾನೆ ಎಂದೂ ಮಹಿಳೆ ಆರೋಪಿಸಿದ್ದಾರೆ.

ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಕುರಿತು ನೃತ್ಯ ಶಿಕ್ಷಕಿಯಿಂದ ದೂರು ಬಂದಿದ್ದು, ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಲ್ ಆಫೀಸರ್ ಸತೇಂದ್ರ ಭೂಷಣ್ ತಿವಾರಿ ತಿಳಿಸಿದ್ದಾರೆ.

ಮಹಾರಾಷ್ಟ್ರದ ಎನ್‌ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದೀಕಿ ಹತ್ಯೆ, ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ಪ್ರಕರಣಗಳಲ್ಲಿ ಲಾರೆನ್ಸ್ ಬಿಷ್ಣೋಯಿ ಗುಂಪಿನ ಹೆಸರು ಕೇಳಿಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.