ಲಖನೌ: ಪಂಚ ರಾಜ್ಯಗಳ ಚುನಾವಣೆ ದಿನಾಂಕವನ್ನು ಪ್ರಕಟಿಸಿ ಕೇಂದ್ರ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿರುವುದನ್ನು ಸ್ವಾಗತಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಮಗದೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಹಾಗೂ ಮಣಿಪುರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಬಳಿಕ ಮಾರ್ಚ್ 10ರಂದು ಮತ ಎಣಿಕೆ ನೇರವೇರಲಿದೆ.
'ನಾವು ಪ್ರಜಾಪ್ರಭುತ್ವದ ಹಬ್ಬವನ್ನು ಸ್ವಾಗತಿಸುತ್ತೇವೆ. ಜನರ ಆಶೀರ್ವಾದದೊಂದಿಗೆ ಡಬಲ್ ಎಂಜಿನ್ (ಕೇಂದ್ರ ಹಾಗೂ ರಾಜ್ಯ) ಸರ್ಕಾರಗಳ ಸಾಧನೆಗಳ ಆಧಾರದ ಮೇಲೆ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಮತ್ತೆ ಸರ್ಕಾರವನ್ನು ರಚಿಸುತ್ತದೆ' ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಂದು ಮೊದಲನೇ ಹಂತ, ಫೆ. 14ರಂದು ಎರಡನೇ, ಫೆ. 20ರಂದು ಮೂರನೇ, ಫೆ. 23ರಂದು ನಾಲ್ಕನೇ, ಫೆ. 27ರಂದು ಐದನೇ, ಮಾರ್ಚ್ 3ರಂದು ಆರನೇ ಮತ್ತು ಮಾ. 10ರಂದು ಏಳನೇ ಹಂತದ ಮತದಾನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.