ನೋಯ್ಡಾ: ನೋಟಾ ಅಲ್ಲ, ರೈತರ ಸಮಸ್ಯೆಗಳಿಗಾಗಿ ಮತ ಚಲಾಯಿಸುವಂತೆ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಅಧ್ಯಕ್ಷ ನರೇಶ್ ಟಿಕಾಯತ್ ಹಾಗೂ ವಕ್ತಾರ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಗುರುವಾರ ಆರಂಭಗೊಂಡಿದೆ. ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ ಒಟ್ಟು 58 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಸಿಸೌಲಿಯಲ್ಲಿ ನಾನು ಕುಟುಂಬ ಸಮೇತ ಮತದಾನ ಮಾಡುತ್ತೇನೆ. ನೀವೂ ಪ್ರಜಾಪ್ರಭುತ್ವದ ಮಹಾಯಜ್ಞದಲ್ಲಿ ಭಾಗಿಯಾಗಿ ಎಂದು ನರೇಶ್ ಟಿಕಾಯತ್ ಮನವಿ ಮಾಡಿದ್ದಾರೆ. ರಾಕೇಶ್ ಟಿಕಾಯತ್, ಮುಜಾಫರ್‌ನಗರದ ಮತಗಟ್ಟೆಯಲ್ಲಿ ಮತದಾನದ ಹಕ್ಕು ಚಲಾಯಿಸಲಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಒಕ್ಕೂಟದ ಭಾಗವಾಗಿರುವ ಬಿಕೆಯು, 2020 ನವೆಂಬರ್‌ನಿಂದ ಒಂದು ವರ್ಷಕ್ಕೂ ಹೆಚ್ಚು ಕಾಲ ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ನಡೆದ ಆಂದೋಲನವನ್ನು ಮುನ್ನಡೆಸಿತ್ತು. ಅಂತಿಮವಾಗಿ ರೈತರ ಬೇಡಿಕೆಗಳಿಗೆ ಮಣಿದ ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.