ಲಖನೌ: ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗದ ಉಪಾಧ್ಯಕ್ಷೆಯಾಗಿ ಸಮಾಜವಾದಿ ಪಕ್ಷದ(ಎಸ್‌ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ ನೇಮಕಗೊಂಡಿದ್ದಾರೆ.
ರಾಜ್ಯ ಮಹಿಳಾ ಆಯೋಗಕ್ಕೆ ಪದಾಧಿಕಾರಿಗಳನ್ನು ನೇಮಿಸಿ ಮಂಗಳವಾರ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಬಬಿತಾ ಚೌಹಾಣ್ ಅವರನ್ನು ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಆಯ್ಕೆ ಮಾಡಿದ್ದು, ಅಪರ್ಣಾ ಯಾದವ್ ಮತ್ತು ಚಾರು ಚೌಧರಿ ಅವರನ್ನು ಆಯೋಗದ ಉಪಾಧ್ಯಕ್ಷರಾಗಿ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಅಪರ್ಣಾ ಯಾದವ್ ಅವರು ಮುಲಾಯಂ ಸಿಂಗ್ ಯಾದವ್ ಅವರ ಮಗ ಪ್ರತೀಕ್ ಯಾದವ್ ಅವರ ಪತ್ನಿ. 2017ರ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಪಿ ಟಿಕೆಟ್‌ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಅಪರ್ಣಾ ಅವರು 2022ರಲ್ಲಿ ಬಿಜೆಪಿ ಸೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.