ADVERTISEMENT

ಅಯೋಧ್ಯೆಯಲ್ಲಿ ಭೂ ಹಗರಣದ ತನಿಖೆ ಕಣ್ಣೊರೆಸುವ ತಂತ್ರ: ಪ್ರಿಯಾಂಕಾ

ಪಿಟಿಐ
Published 23 ಡಿಸೆಂಬರ್ 2021, 9:50 IST
Last Updated 23 ಡಿಸೆಂಬರ್ 2021, 9:50 IST
ಯಾಂಕಾ ಗಾಂಧಿ ವಾದ್ರಾ
ಯಾಂಕಾ ಗಾಂಧಿ ವಾದ್ರಾ   

ನವದೆಹಲಿ: ಅಯೋಧ್ಯೆ ಭೂ ಹಗರಣದ ಕುರಿತು ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿರುವುದು ಕಣ್ಣೊರೆಸುವ ತಂತ್ರವಾಗಿದ್ದು, ಸುಪ್ರೀಂ ಕೋರ್ಟ್ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಪ್ರಿಯಾಂಕಾ, ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಕ್ಕೆ ವಿನಂತಿ ಮಾಡಿದರು.

ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಿಯಾಂಕಾ, ಬಿಜೆಪಿ ನಾಯಕರು ಲೂಟಿ ಮಾಡುತ್ತಿದ್ದು, ಜನರ ನಂಬಿಕೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ಜಾಗಕ್ಕೆ ಸಮೀಪದಲ್ಲಿ ಬಿಜೆಪಿ ನಾಯಕರ ಹಾಗೂ ಸರ್ಕಾರಿ ಅಧಿಕಾರಿಗಳ ಸಂಬಂಧಿಕರು ಭೂ ಕಬಳಿಕೆ ಮಾಡಿದ್ದಾರೆ ಎಂಬ ಆರೋಪದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಈ ಕುರಿತು ಕೂಲಂಕಷವಾಗಿ ತನಿಖೆ ನಡೆಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.