ಲಖನೌ: ಕ್ರಿಮಿನಲ್ ಪ್ರಕರಣಗಳ ಆರೋಪಿಗಳ ಮನೆಗಳನ್ನು ಅಥವಾ ಅವರಿಗೆ ಸೇರಿದ ಕಟ್ಟಡಗಳನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸುವ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ನೀಡಿರುವ ತೀರ್ಪನ್ನು ಉತ್ತರ ಪ್ರದೇಶ ಸರ್ಕಾರ ಸ್ವಾಗತಿಸಿದೆ.
ಈ ತೀರ್ಪಿನ ಕಾರಣದಿಂದಾಗಿ ಸಂಘಟಿತ ಅಪರಾಧಗಳನ್ನು ಹತ್ತಿಕ್ಕಲು ಹಾಗೂ ಕ್ರಿಮಿನಲ್ ಅಪರಾಧ ಎಸಗಿದವರಲ್ಲಿ ಕಾನೂನಿನ ಪರಿಣಾಮಗಳ ಬಗ್ಗೆ ಭೀತಿಯನ್ನು ಮೂಡಿಸಲು ಸಾಧ್ಯವಾಗುತ್ತದೆ ಎಂದು ಅದು ಹೇಳಿದೆ.
ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿರುವ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ಪ್ರತಿವಾದಿ ಆಗಿರಲಿಲ್ಲ ಎಂಬ ಸ್ಪಷ್ಟನೆ ನೀಡಿರುವ ಸರ್ಕಾರದ ವಕ್ತಾರರೊಬ್ಬರು, ಈ ತೀರ್ಪು ಜಮಿಯತ್ ಉಲೇಮಾ ಎ ಹಿಂದ್ ಮತ್ತು ಉತ್ತರ ದೆಹಲಿ ನಗರ ಪಾಲಿಕೆ ನಡುವಿನ ಪ್ರಕರಣದಲ್ಲಿ ಬಂದಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.