ADVERTISEMENT

Jhansi hospital fire: ಅಗ್ನಿ ಅವಘಡದಿಂದ ಪಾರಾಗಿದ್ದ ನವಜಾತ ಶಿಶು ಸಾವು

ಪಿಟಿಐ
Published 17 ನವೆಂಬರ್ 2024, 13:25 IST
Last Updated 17 ನವೆಂಬರ್ 2024, 13:25 IST
<div class="paragraphs"><p>ಲಕ್ಷ್ಮೀ ಬಾಯಿ ವೈದ್ಯಕೀಯ ಆಸ್ಪತ್ರೆಯಲ್ಲಿ&nbsp;&nbsp;ಅಗ್ನಿ ಅವಘಡ</p></div>

ಲಕ್ಷ್ಮೀ ಬಾಯಿ ವೈದ್ಯಕೀಯ ಆಸ್ಪತ್ರೆಯಲ್ಲಿ  ಅಗ್ನಿ ಅವಘಡ

   

(ಪಿಟಿಐ ಚಿತ್ರ) 

ಲಖನೌ: ಝಾನ್ಸಿ ನಗರದ ಸರ್ಕಾರಿ ಆಸ್ಪತ್ರೆಯ ಮಕ್ಕಳ ವಾರ್ಡ್‌ಗೆ ಬೆಂಕಿ ಬಿದ್ದ ಸಂದರ್ಭದಲ್ಲಿ ರಕ್ಷಿಸಲಾಗಿದ್ದ ನವಜಾತ ಶಿಶು ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಇದರೊಂದಿಗೆ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಆಸ್ಪತ್ರೆಯ ಮಕ್ಕಳ ವಾರ್ಡ್‌ಗೆ ದಾಖಲಾಗಿದ್ದ 11 ನವಜಾತ ಶಿಶುಗಳು ಮೃತಪಟ್ಟಂತಾಗಿದೆ.

ಶುಕ್ರವಾರ ರಾತ್ರಿ ಅಗ್ನಿ ಅವಘಡದ ಬಳಿಕ 10 ಮಕ್ಕಳು ಸಾವಿಗೀಡಾಗಿದ್ದವು. ಸದ್ಯ ಅನಾರೋಗ್ಯದಿಂದ ಮೃತಪಟ್ಟ ಮಗುವಿಗೆ ಯಾವುದೇ ಸುಟ್ಟ ಗಾಯಗಳು ಇರಲಿಲ್ಲ ಎಂದು ಝಾನ್ಸಿಯ ಜಿಲ್ಲಾಧಿಕಾರಿ ಅವಿನಾಶ್‌ ಕುಮಾರ್‌ ತಿಳಿಸಿದ್ದಾರೆ.

ಮೂರು ಹಂತದ ತನಿಖೆಗೆ ಆದೇಶ:

ಪ್ರಕರಣ ಕುರಿತು ಮೂರು ಹಂತದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಶನಿವಾರ ಆದೇಶಿಸಿದೆ. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿಯ ಮಹಾ ನಿರ್ದೇಶಕರ ನೇತೃತ್ವದಲ್ಲಿ ನಾಲ್ವರ ಸಮಿತಿಯನ್ನು ರಚಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣವನ್ನು ತಿಳಿಯಲು ಹಾಗೂ ಘಟನೆಯ ಹಿಂದೆ ನಿರ್ಲಕ್ಷ್ಯವಿದೆಯೇ ಎಂಬ ಕುರಿತು ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.

ಘಟನೆಯ ಹಿನ್ನೆಲೆ:

ಬುಂದೇಲ್‌ಖಂಡ ಪ್ರದೇಶದಲ್ಲಿರುವ, ರಾಜ್ಯದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾದ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ‘ನವಜಾತ ಶಿಶುಗಳ ತೀವ್ರ ನಿಗಾ ಘಟಕ’ದಲ್ಲಿ (ಎನ್ಐಸಿಯು) ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಶಾರ್ಟ್‌ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಪ್ರಕರಣವು ಆಕಸ್ಮಿಕವಷ್ಟೆ–ಸಮಿತಿ: 

ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡಕ್ಕೆ ಸ್ವಿಚ್‌ಬೋರ್ಡ್‌ನಲ್ಲಿ ಉಂಟಾದ ಶಾರ್ಟ್‌ ಸರ್ಕ್ಯೂಟ್ ಕಾರಣ. ಈ ಅವಘಡದಲ್ಲಿ ಯಾವುದೇ ಪೂರ್ವ ನಿಯೋಜಿತ ಸಂಚು ಇಲ್ಲ ಎಂದು ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರವು ರಚನೆ ಮಾಡಿದ್ದ ನಾಲ್ವರು ಸದಸ್ಯರ ಸಮಿತಿಯು ತಿಳಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.