ಮೀರತ್: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹಣಕ್ಕಾಗಿ ಕೊರೊನಾ ವೈರಸ್ ಸೋಂಕಿತರಿಗೆ ನೆಗೆಟಿವ್ ವರದಿ ನೀಡುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಆಸ್ಪತ್ರೆಯ ಪರವಾನಗಿಯನ್ನು ರದ್ದುಪಡಿಸಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ವೈರಲ್ ಆಗಿತ್ತು. ಅದರಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳು ಕೋವಿಡ್–19 ಸೋಂಕು ದೃಢಪಟ್ಟವರಿಂದ ₹ 2500 ಪಡೆದು ನೆಗೆಟವ್ ವರದಿ ನೀಡುತ್ತಿರುವುದು ಬೆಳಕಿಗೆ ಬಂದಿತ್ತು.
ಕೂಡಲೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದೆ.ಆ ಖಾಸಗಿ ಆಸ್ಪತ್ರೆಯನ್ನು ಸೀಲ್ ಮಾಡುವ ಮೂಲಕ ಪರವಾನಿಗೆಯನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನಿಲ್ ಧಿಂಗ್ರಾ ತಿಳಿಸಿದ್ದಾರೆ.
ಈಗಾಗಲೇ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು ವಿಡಿಯೊದಲ್ಲಿರುವ ಸಿಬ್ಬಂದಿ ಹಾಗೂ ಆಸ್ಪತ್ರೆಯ ವರಿಷ್ಠರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಧಿಂಗ್ರಾ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.