ಲಖನೌ: ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಆರೋಪ ಎದುರಿಸುತ್ತಿದ್ದ ಉತ್ತರ ಪ್ರದೇಶದ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ರಾಕೇಶ್ ಸಚನ್‌ಗೆ ಕಾನ್ಪುರ ಜಿಲ್ಲಾ ನ್ಯಾಯಾಲಯವು ಸೋಮವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಅಲೋಕ್ ಯಾದವ್ ಅವರು ಸಚನ್‌ಗೆ ₹1,500 ದಂಡವನ್ನೂ ವಿಧಿಸಿದ್ದಾರೆ. ಬಳಿಕ ವೈಯಕ್ತಿಕ ಖಾತರಿ ಹಾಗೂ ₹20 ಸಾವಿರದ ಎರಡು ಬಾಂಡ್‌ಗಳ ಮೇಲೆ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಈ ಪ್ರಕರಣದ ವಿಚಾರಣೆಗಾಗಿ ಶನಿವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಚನ್ ಅವರು ತೀರ್ಪು ಪ್ರಕಟವಾಗಲು ಕೆಲವು ನಿಮಿಷಗಳು ಬಾಕಿ ಇದ್ದಾಗ ನ್ಯಾಯಾಲಯದಿಂದ ಪರಾರಿಯಾಗಿದ್ದರು. ಬಳಿಕ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ನ್ಯಾಯಾಲಯದ ಸಿಬ್ಬಂದಿ ಅವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸೋಮವಾರ ಅವರು ನ್ಯಾಯಾಲಯಕ್ಕೆ ಶರಣಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.