ADVERTISEMENT

ಉತ್ತರ ಪ್ರದೇಶ ತಾಲೂಕು ಮಟ್ಟದಲ್ಲಿ ಅಗ್ನಿಶಾಮಕ ಠಾಣೆ ಹೊಂದಿರುವ ದೇಶದ ಮೊದಲ ರಾಜ್ಯ?

ಪಿಟಿಐ
Published 29 ಫೆಬ್ರುವರಿ 2024, 13:29 IST
Last Updated 29 ಫೆಬ್ರುವರಿ 2024, 13:29 IST
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್    

ಲಖನೌ: 'ಶೀಘ್ರದಲ್ಲೇ ಉತ್ತರ ಪ್ರದೇಶ ತಾಲೂಕು ಮಟ್ಟದಲ್ಲಿ ಅಗ್ನಿಶಾಮಕ ಠಾಣೆಗಳನ್ನು ಹೊಂದಿರುವ ದೇಶದ ಮೊದಲ ರಾಜ್ಯವಾಗಲಿದೆ' ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಹೇಳಿದರು.

ತಮ್ಮ ಅಧಿಕೃತ ನಿವಾಸದಲ್ಲಿ 38 ಅಗ್ನಿಶಾಮಕ ಠಾಣೆಗಳಿಗೆ ವರ್ಚುವಲ್‌ ಮೂಲಕ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕಳೆದ ಏಳು ವರ್ಷಗಳಲ್ಲಿ ರಾಜ್ಯದಾದ್ಯಂತ 70ಕ್ಕೂ ಹೆಚ್ಚು ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ADVERTISEMENT

‘1944ರಲ್ಲಿ ಉತ್ತರ ಪ್ರದೇಶದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಸ್ಥಾಪಿಸಲಾಯಿತು. ಅಲ್ಲಿಂದ 2017 ರವರೆಗೆ, ರಾಜ್ಯದಲ್ಲಿ ಕೇವಲ 288 ಅಗ್ನಿಶಾಮಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆದರೆ ಕಳೆದ 7 ವರ್ಷಗಳಲ್ಲಿ, 70ಕ್ಕೂ ಹೆಚ್ಚು ಹೊಸ ಅಗ್ನಿಶಾಮಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದರಿಂದ ತಾಲೂಕು ಮಟ್ಟದಲ್ಲಿ ಅಗ್ನಿಶಾಮಕ ಠಾಣೆಗಳನ್ನು ಹೊಂದಿರುವ ದೇಶದ ಮೊದಲ ರಾಜ್ಯವಾಗಿ ಉತ್ತರ ಪ್ರದೇಶ ಹೊರಹೊಮ್ಮಲಿದೆ' ಎಂದು ಸಿಎಂ ಹೇಳಿದರು.

ತುರ್ತು ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ನಾವು ಈ ಇಲಾಖೆಯ ಬಲವರ್ಧನೆಗೆ ಸುಮಾರು ₹1,400 ಕೋಟಿ ವ್ಯಯಿಸಿದ್ದೇವೆ. ಜೀವ ಮತ್ತು ಆಸ್ತಿ ಹಾನಿ ತಪ್ಪಿಸುವುದು ನಮ್ಮ ಮೊದಲ ಆದ್ಯತೆ. ಇಲಾಖೆ ಶೀಘ್ರವಾಗಿ ಪ್ರತಿಕ್ರಿಯಿಸುವುದರಿಂದ ಸರ್ಕಾರದ ಮೇಲೆ ಸಾಮಾನ್ಯ ಜನರ ನಂಬಿಕೆಯನ್ನು ಬಲಪಡಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ಶಾಲಾ-ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ಮತ್ತು ರಕ್ಷಣಾ ಕ್ರಮಗಳ ಬಗ್ಗೆ ಮಕ್ಕಳಿಗೆ ತರಬೇತಿ ಮತ್ತು ಸಮಾಲೋಚನೆ ನಡೆಸಬೇಕು. ಇತ್ತೀಚಿನ ವರ್ಷಗಳಲ್ಲಿ ಈ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ. ಪರಿಣಾಮವಾಗಿ 33 ಸಾವಿರಕ್ಕೂ ಹೆಚ್ಚು ಅಗ್ನಿ ಅವಘಡಗಳಲ್ಲಿ 3,780 ಜೀವಗಳನ್ನು ಉಳಿಸಲಾಗಿದೆ. ಇದಲ್ಲದೇ 5 ಸಾವಿರಕ್ಕೂ ಹೆಚ್ಚು ಪ್ರಾಣಿ ಮತ್ತು ₹150 ಕೋಟಿ ಮೌಲ್ಯದ ಆಸ್ತಿ ಹಾನಿಯಾಗದಂತೆ ರಕ್ಷಿಸಲಾಗಿದೆ ಎಂದರು.

ಸರ್ಕಾರವು ಅಗ್ನಿಶಾಮಕ ಸೇವೆಗಳನ್ನು ಆಧುನೀಕರಿಸಿದೆ. ಮಾತ್ರವಲ್ಲದೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯನ್ನೂ ‌‌‌ಸ್ಥಾಪಿಸಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.