ADVERTISEMENT

ಯಾವ ಪ್ರಧಾನಿಯೂ ಬಳಸದ ‍ಪದಗಳನ್ನು ಮೋದಿ ಬಳಸುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ

ಪಿಟಿಐ
Published 25 ಮೇ 2024, 14:00 IST
Last Updated 25 ಮೇ 2024, 14:00 IST
<div class="paragraphs"><p>ಪ್ರಿಯಾಂಕಾ ಗಾಂಧಿ</p></div>

ಪ್ರಿಯಾಂಕಾ ಗಾಂಧಿ

   

ಪಿಟಿಐ

ನವದೆಹಲಿ: ‘ದೇಶದ ಇತಿಹಾಸದಲ್ಲಿಯೇ ಯಾವ ಪ್ರಧಾನಿಯೂ ಬಳಸದ ಪದಗಳನ್ನು ಪ್ರಧಾನಿ ನರೇಂದ್ರ ಮೋದಿ ಬಳಸುತ್ತಿದ್ದಾರೆ’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೋದಿ ಅವರ ‘ಮುಜ್ರಾ’ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ADVERTISEMENT

ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಪ್ರಿಯಾಂಕಾ, ‘ಬಿಹಾರದಲ್ಲಿ ಪ್ರಧಾನಿ ಮೋದಿ ಅವರು ಮಾಡಿದ ಭಾಷಣ ಕೇಳಿದ್ದೀರಾ? ದೇಶದ ಇತಿಹಾಸದಲ್ಲಿ ಯಾವುದೇ ಪ್ರಧಾನಿ ಬಳಸದಂತಹ ಪದಗಳನ್ನು ಅವರು ಬಳಸಿದ್ದಾರೆ’ ಎಂದು ಕಿಡಿಕಾರಿದರು.

ಮೋದಿ ಅವರ ಮುಜ್ರಾ ಹೇಳಿಕೆಗೆ ‘ಎಕ್ಸ್‌’ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, ‘ಪ್ರಧಾನಿ ಹುದ್ದೆಯಲ್ಲಿರುವ ವ್ಯಕ್ತಿ ಇಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ’ ಎಂದಿದ್ದಾರೆ.

‘ಇಂದು ಪ್ರಧಾನಿಯವರ ಬಾಯಲ್ಲಿ ಮುಜ್ರಾ ಪದ ಬಳಕೆಯಾಗಿರುವುದನ್ನು ನಾನು ಕೇಳಿದೆ. ಮೋದಿ ಅವರೇ ಇದೇನಿದು? ಬಹುಶಃ ಬಿಸಿಲಿನಲ್ಲಿ ಪ್ರಚಾರ ಮಾಡುತ್ತಿರುವುದು ನಿಮ್ಮ ಮನಸ್ಸಿನ ಮೇಲೆ ಪರಿಣಾಮ ಬೀರಿರಬಹುದು’ ಎಂದು ವ್ಯಂಗ್ಯ ಮಾಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದ ಪಾಟಲಿಪುತ್ರದಲ್ಲಿ ಶನಿವಾರ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ವಿರೋಧ ಪಕ್ಷಗಳ ವಿರುದ್ಧ ‘ಮುಜ್ರಾ’ ಪದ ಬಳಕೆ ಮಾಡಿದ್ದರು. ‘ಮುಸ್ಲಿಮರ ಮತಗಳನ್ನು ಪಡೆಯಲು ವಿರೋಧ ಪಕ್ಷಗಳು ಈಗ ಮುಜ್ರಾ (ಮೊಘಲ್ ಸಾಮ್ರಾಜ್ಯದ ಅಡಿಯಲ್ಲಿ ಹಾಗೂ ನಂತರದಲ್ಲಿ ವೇಶ್ಯೆಯರು ಪ್ರದರ್ಶಿಸುವ ಮಾದಕ ನೃತ್ಯ) ಮಾಡುತ್ತಿವೆ’ ಎಂದು ಅವರು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.