ಮುಜಾಫರ್‌ನಗರ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಮಹಿಳೆಯರಿಗೆ ಕೋವಿಡ್-19 ಲಸಿಕೆ ನೀಡುವ ಬದಲು ರೇಬಿಸ್ ತಡೆ ಚುಚ್ಚುಮದ್ದನ್ನು ನೀಡಲಾಗಿದೆ ಎಂದು ಅವರ ಕುಟುಂಬದವರು ಶುಕ್ರವಾರ ಆರೋಪಿಸಿದ್ದಾರೆ.
ಕೊರೊನಾ ವೈರಸ್ ವಿರುದ್ಧ ಲಸಿಕೆ ಪಡೆಯಲು ಸರೋಜ (70), ಅನಾರ್ಕಲಿ (72) ಮತ್ತು ಸತ್ಯವತಿ (60) ಎಂಬ ಮಹಿಳೆಯರು ಗುರುವಾರ ಕಾಂಧ್ಲಾದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದರು.
ಈ ವೇಳೆ ಡೋಸ್ ನೀಡಿದ ನಂತರ, ಮಹಿಳೆಯರಿಗೆ ರೇಬಿಸ್ ತಡೆ ಲಸಿಕೆಯ ಸ್ಲಿಪ್‌ಗಳನ್ನು ನೀಡಲಾಯಿತು. ಇದನ್ನ ವಿರೋಧಿಸಿ ಮಹಿಳೆಯರ ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ತಪ್ಪು ಮಾಡಿದ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆಯ ಆಧಾರದ ಮೇಲೆ ತನಿಖೆ ನಡೆಸಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಕೇಂದ್ರದ ಉಸ್ತುವಾರಿ ಬಿಜೇಂದ್ರ ಸಿಂಗ್ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.