ಲಖನೌ: ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ರೈತರು, ಕೋವಿಡ್ ಯೋಧರು, ಶಿಕ್ಷಕರು ಮತ್ತು ಮಹಿಳೆಯರಿಗೆ ಸಂಬಂಧಿಸಿದ ವಿಚಾರಗಳನ್ನು ಉಲ್ಲೇಖಿಸಿ ಪ್ರಣಾಳಿಕೆಯನ್ನು ಸಿದ್ದಪಡಿಸಲಾಗಿದೆ.
ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು ಇಲ್ಲಿವೆ...
*ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ 10 ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗುವುದು.
*ಭತ್ತ ಮತ್ತು ಗೋಧಿಯನ್ನು ಕ್ವಿಂಟಲ್‌ಗೆ ₹ 2500 ಹಾಗೂ ಕಬ್ಬನ್ನು ₹ 400ಕ್ಕೆ ಖರೀದಿಸಲಾಗುವುದು.
*ವಿದ್ಯುತ್ ದರವನ್ನು ಅರ್ಧದಷ್ಟು ಕಡಿಮೆ ಮಾಡಲಾಗುವುದು.
*ಸಾಂಕ್ರಾಮಿಕದ ಅವಧಿಯಲ್ಲಿ ಬಾಕಿ ಇರುವ ವಿದ್ಯುತ್ ಬಿಲ್ ಅನ್ನು ಮನ್ನಾ ಮಾಡಲಾಗುವುದು.
*ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾದ ಕುಟುಂಬಗಳಿಗೆ ₹ 25,000 ನೀಡಲಾಗುವುದು.
*ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ ಸಾರ್ವಜನಿಕ ವಲಯಗಳಲ್ಲಿ ಖಾಲಿ ಇರುವ 12 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಜೊತೆಗೆ ಎಂಟು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಾಗುವುದು.
*ಶಾಲೆಗಳಲ್ಲಿ ಅಡುಗೆ ತಯಾರಿಸುವ ವ್ಯಕ್ತಿಗೆ ₹ 5,000 ವೇತನ ನೀಡಲಾಗುವುದು.
*ಮಹಿಳಾ ಪೊಲೀಸರಿಗೆ ಹತ್ತಿರದ ಸ್ಥಳದಲ್ಲಿ ಪೋಸ್ಟಿಂಗ್ ಕೊಡಲಾಗುವುದು.
*ಮೃತಪಟ್ಟ ಕೋವಿಡ್ ಯೋಧರ ಕುಟುಂಬಗಳಿಗೆ ₹ 50 ಲಕ್ಷ ಪರಿಹಾರ ನೀಡಲಾಗುವುದು.
*ಅನುಭವ ಮತ್ತು ನಿಯಮಗಳ ಆಧಾರದ ಮೇಲೆ ಶಿಕ್ಷಕರು ಹಾಗೂ ಶಿಕ್ಷಾ ಮಿತ್ರರನ್ನು ಖಾಯಂಗೊಳಿಸಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.