ADVERTISEMENT

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ| ಮೊದಲ ಪ್ರಯತ್ನದಲ್ಲೇ ಗೆದ್ದ ಅಖಿಲೇಶ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮಾರ್ಚ್ 2022, 14:50 IST
Last Updated 10 ಮಾರ್ಚ್ 2022, 14:50 IST
ಅಖಿಲೇಶ್‌ ಯಾದವ್‌
ಅಖಿಲೇಶ್‌ ಯಾದವ್‌    

ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ತಮ್ಮ ಮೊದಲ ವಿಧಾನಸಭೆ ಚುನಾವಣೆಯಲ್ಲಿ ಕರ್ಹಾಲ್ ಕ್ಷೇತ್ರದಲ್ಲಿ 14,7237 ಮತಗಳನ್ನು ಪಡೆದು ಗೆದ್ದಿದ್ದಾರೆ.

ಅವರು ತಮ್ಮ ಸಮೀಪ ಸ್ಪರ್ಧಿ ಬಿಜೆಪಿಯ ಎಸ್‌.ಪಿ ಸಿಂಗ್ ಬಘೇಲ್ ಅವರನ್ನು 66,782 ಮತಗಳಿಂದ ಮಣಿಸಿದರು.

ಕರ್ಹಾಲ್‌ನಲ್ಲಿ ಸಮಾಜವಾದಿ ಪಕ್ಷವು 1993 ರಿಂದ ಸತತವಾಗಿ ಗೆಲ್ಲುತ್ತಾ ಬಂದಿದೆ. ಆದರೆ, 2002ರಲ್ಲಿ ಮಾತ್ರ ಇಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರು.

ADVERTISEMENT

ಅಜಮ್‌ಘಡದ ಸಂಸದರಾಗಿರುವ ಅಖಿಲೇಶ್‌ ಯಾದವ್‌ 2012, 2017ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. 2012ರಲ್ಲಿ ಮುಖ್ಯಮಂತ್ರಿಯಾಗಬೇಕಾದ ಸಂದರ್ಭ ಒದಗಿ ಬಂದಾಗ ಕನೌಜ್‌ನ ಸಂಸದರಾಗಿದ್ದ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಪರಿಷತ್‌ ಪ್ರವೇಶಿಸಿದ್ದರು.

2022ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆರಂಭದಲ್ಲಿ ಹೇಳಿದ್ದ ಅಖಿಲೇಶ್‌ ಯಾದವ್‌, ಸಿಎಂ ಯೋಗಿ ಆದಿತ್ಯ ನಾಥ್‌ ಅವರು ಚುನಾವಣೆ ಕಣಕ್ಕೆ ಧುಮುಕುತ್ತಲೇ ತಾವೂ ಕೂಡ ಸ್ಪರ್ಧೆ ಮಾಡುವ ತೀರ್ಮಾನ ಕೈಗೊಂಡಿದ್ದರು.

ಕರ್ಹಾಲ್‌ ಕ್ಷೇತ್ರವು, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಮ್‌ ಸಿಂಗ್‌ ಯಾದವ್‌ ಅವರ ಹುಟ್ಟೂರನ್ನು ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.