ADVERTISEMENT

ಉನ್ನಾವ್‌ನಲ್ಲಿ ಮತ್ತೊಂದು ದುರಂತ: ಹೊಲದಲ್ಲಿ ದಲಿತ ಬಾಲಕಿಯರ ಶವಗಳು ಪತ್ತೆ

ಉತ್ತರ ಪ್ರದೇಶ

ಏಜೆನ್ಸೀಸ್
Published 18 ಫೆಬ್ರುವರಿ 2021, 9:40 IST
Last Updated 18 ಫೆಬ್ರುವರಿ 2021, 9:40 IST
ಉನ್ನಾವ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಟುಂಬಸ್ಥರು ಮತ್ತು ಗ್ರಾಮಸ್ಥರು
ಉನ್ನಾವ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಟುಂಬಸ್ಥರು ಮತ್ತು ಗ್ರಾಮಸ್ಥರು   

ಉನ್ನಾವ್(ಉತ್ತರ ಪ್ರದೇಶ): ಇಲ್ಲಿನ ಹೊಲವೊಂದರಲ್ಲಿ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಮೃತದೇಹಗಳು ಪತ್ತೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ದನಕರುಗಳಿಗೆ ಮೇವು ತರಲು ಬುಧವಾರ ಸಾಯಂಕಾಲ ಹೊರಹೋದ ಮೂವರು ಬಾಲಕಿಯರು ವಾಪಸ್ಸು ಮನೆಗೆ ಹಿಂತಿರುಗಿಲ್ಲ. ಬಾಲಕಿಯರಿಗಾಗಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹೊಲಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಗಾಯಗೊಂಡ ಸ್ಥಿತಿಯಲ್ಲಿದ್ದ ಮೂವರು ಬಾಲಕಿಯರನ್ನು ಸ್ಥಳೀಯರು ಗುರುತಿಸಿದ್ದಾರೆ. ಪೊಲೀಸರ ಸಹಾಯದೊಂದಿಗೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ ಎಂಬುದಾಗಿ ಘೋಷಿಸಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಇನ್ನೊಬ್ಬ ಬಾಲಕಿಯನ್ನು ಉನ್ನಾವ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಲಕರ್ಣಿ, 'ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT

ಬಾಲಕಿಯರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯರ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.