ADVERTISEMENT

ಅಯೋಧ್ಯೆಯ ‘ಪ್ರಸಾದ’ವೆಂದು ಸೇನಾ ಮುಖ್ಯಸ್ಥರಿಗೆ ರಾಮಾಯಣವನ್ನು ನೀಡಿದ ಯೋಗಿ

ಏಜೆನ್ಸೀಸ್
Published 7 ಆಗಸ್ಟ್ 2020, 11:49 IST
Last Updated 7 ಆಗಸ್ಟ್ 2020, 11:49 IST
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಸೇನೆ ಮುಖ್ಯಸ್ಥ ಮನೋಜ್‌ ಮುಕುಂದ್‌ ನರವಾಣೆ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಸೇನೆ ಮುಖ್ಯಸ್ಥ ಮನೋಜ್‌ ಮುಕುಂದ್‌ ನರವಾಣೆ   

ಲಖನೌ:ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಭಾರತೀಯ ಸೇನೆಯ ಮುಖ್ಯಸ್ಥ ಮನೋಜ್‌ ಮುಕುಂದ್‌ ನರವಾಣೆ ಅವರು ಶುಕ್ರವಾರ ಭೇಟಿಯಾದರು. ತಮ್ಮ ನಿವಾಸಕ್ಕೆ ಆಗಮಿಸಿದ್ದಸೇನಾ ಮುಖ್ಯಸ್ಥರಿಗೆ ಯೋಗಿ ಅವರು ರಾಮಾಯಣ, ಹುನುಮಾನ್‌ ಚಾಲೀಸಹಾಗೂ ನಾಣ್ಯವೊಂದನ್ನು ಅಯೋಧ್ಯೆಯ ‘ಪ್ರಸಾದ’ವೆಂದು ನೀಡಿದರು.

ಇದೇ ವೇಳೆ,ಸೇನಾ ಮುಖ್ಯಸ್ಥರು ಮುಖ್ಯಮಂತ್ರಿ ಅವರಿಗೆ ಸ್ಮರಣಿಕೆಯೊಂದನ್ನು ನೀಡಿದರು.

ಪ್ರಧಾನಿ ನರೇಂದ್ರ ಮೊದಿ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಸ್ಥಳದಲ್ಲಿ ಬುಧವಾರ ಭೂಮಿ ಪೂಜೆ ನೆರವೇರಿಸಿದ್ದರು. ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿನ ನಿವೇಶನವನ್ನು ದೇವಾಲಯದ ಮಂಡಳಿಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್‌ ನವೆಂಬರ್‌ 9ರಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT