ನವದೆಹಲಿ: ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
‘ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಗುರುವಾರ ಸಂಜೆ ದೆಹಲಿಗೆ ವಾಪಸಾಗುತ್ತಿದ್ದ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ’ ಎಂದು ಪೊಲೀಸ್ ಅಧಿಕಾರಿ ದೀಪಕ್ ಭುಕರ್ ಮಾಹಿತಿ ನೀಡಿದ್ದಾರೆ.
‘ಓವೈಸಿಯ ಹಿಂದೂ ವಿರೋಧಿ ಹೇಳಿಕೆಗಳಿಂದ ಆಕ್ರೋಶಗೊಂಡು ಈ ಕೃತ್ಯ ನಡೆಸಿದ್ದೇವೆ ಎಂಬುದಾಗಿ ಆರೋಪಿಗಳು ತಿಳಿಸಿದ್ದಾರೆ’ ಎಂದು ಭುಕರ್ ಹೇಳಿದ್ದಾರೆ.
ಮೀರತ್‌ನಲ್ಲಿ ಚುನಾವಣಾ ಪ್ರಚಾರ ಸಭೆ ಮುಗಿಸಿ ದೆಹಲಿಗೆ ತೆರಳುತ್ತಿದ್ದಾಗ ಓವೈಸಿ ಅವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.