ADVERTISEMENT

ಜಾಮೀನಿನ ಮೇಲೆ ಹೊರಬಂದು ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಅತ್ಯಾಚಾರ ಆರೋಪಿ!

ಪಿಟಿಐ
Published 20 ಸೆಪ್ಟೆಂಬರ್ 2024, 13:16 IST
Last Updated 20 ಸೆಪ್ಟೆಂಬರ್ 2024, 13:16 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಸಂಭಾಲ್‌ (ಉತ್ತರ ಪ್ರದೇಶ): ಜಾಮೀನಿನ ಮೇಲೆ ಹೊರಬಂದ ಅತ್ಯಾಚಾರ ಆರೋಪಿಯೊಬ್ಬ ಸಂತ್ರಸ್ತೆಯನ್ನು ಗುಂಡಿಕ್ಕಿ ಹತ್ಯೆಗೈದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮತ್ತು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಸೆಪ್ಟೆಂಬರ್‌ 18ರ ರಾತ್ರಿ ಕೈಲಾ ದೇವಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಶ್ರೀಶಾ ಚಂದ್ರ ಹೇಳಿದ್ದಾರೆ.

ADVERTISEMENT

ಫೆಬ್ರುವರಿಯಲ್ಲಿ ಗಾಜಿಯಾಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಮುಖ ಆರೋಪಿ ರಿಂಕು (20) ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಈ ತಿಂಗಳಾರಂಭದಲ್ಲಿ ಆರೋಪಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಎಂದು ಅವರು ತಿಳಿಸಿದ್ದಾರೆ.

ಬಾಲಕಿ ತನ್ನ ಸಹೋದರ ಮತ್ತು ತಾಯಿಯೊಂದಿಗೆ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ದಾಖಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.