ADVERTISEMENT

ಉತ್ತರ ಪ್ರದೇಶದಲ್ಲಿ 2022ರಲ್ಲಿ ಪ್ರಜಾಪ್ರಭುತ್ವ ಕ್ರಾಂತಿ: ಅಖಿಲೇಶ್ ಯಾದವ್

ಪಿಟಿಐ
Published 30 ಜೂನ್ 2021, 9:36 IST
Last Updated 30 ಜೂನ್ 2021, 9:36 IST
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್   

ಲಖನೌ: ‘ಪ್ರಸ್ತುತ ಉತ್ತರ ಪ್ರದೇಶದಲ್ಲಿರುವ ‘ಹಾನಿಕಾರಕ’ ಮತ್ತು ‘ನಕಾರಾತ್ಮಕ’ ರಾಜಕೀಯದ ವಿರುದ್ಧವಾಗಿ 2022ರಲ್ಲಿ ಪ್ರಜಾಪ್ರಭುತ್ವದ ಕ್ರಾಂತಿ ಆಗಲಿದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬುಧವಾರ ಹೇಳಿದರು.

‘ಈಗಿನ ಹಾನಿಕಾರಕ, ಸಾಂಪ್ರಾದಾಯಿಕ, ನಕಾರಾತ್ಮಕ ರಾಜಕೀಯದ ವಿರುದ್ಧ ಒಗ್ಗೂಡೋಣ. ಶೋಷಿತರು, ನಿರ್ಲಕ್ಷ್ಯಿತರು, ದಲಿತರು,ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಪರವಾದ ಹೊಸ ರಾಜಕೀಯ ಸೃಷ್ಟಿಯಾಗಲಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

2022ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಅವರು, ‘ಉತ್ತರ ಪ್ರದೇಶದಲ್ಲಿ 2022ರಲ್ಲಿ ಕೇವಲ ಚುನಾವಣೆ ನಡೆಯುವುದಿಲ್ಲ. ಬದಲಾಗಿ ನಾಟಕೀಯ ಕ್ರಾಂತಿಯಾಗಲಿದೆ. ವಿಧಾನಸಭಾ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ 350 ಸೀಟುಗಳನ್ನುಸಮಾಜವಾದಿ ಪಕ್ಷ ಗೆಲ್ಲಲಿದೆ. ಜನರು ಬಿಜೆಪಿಯ ವಿರುದ್ಧ ಇದ್ದಾರೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.