ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ತೀರಥ್‌ಸಿಂಗ್ ರಾವತ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಈ ಕುರಿತು ಟ್ವಿಟರ್‌ನಲ್ಲಿ ಪ್ರಕಟಿಸಿರುವ ಸಿಎಂ ರಾವತ್, 'ನಾನು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದು, ಯಾವುದೇ ತೊಂದರೆಗಳಿಲ್ಲ' ಎಂದು ತಿಳಿಸಿದ್ದಾರೆ.
ಕೋವಿಡ್–19 ದೃಢಪಟ್ಟಿರುವುದರಿಂದ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಅಲ್ಲದೆ ಅವರ ಆರೋಗ್ಯ ಪರಿಸ್ಥಿತಿಯನ್ನು ವೈದ್ಯರು ನಿಗಾ ವಹಿಸುತ್ತಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿರುವ ಜನರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗುವಂತೆ ಸಿಎಂ ರಾವತ್ ಸಲಹೆ ನೀಡಿದ್ದಾರೆ.
'ಕೊರೊನಾ ವೈರಸ್ ಪರೀಕ್ಷಾ ವರದಿಯು ಪಾಸಿಟಿವ್ ಬಂದಿದೆ. ನಾನು ಕ್ಷೇಮವಾಗಿದ್ದು ಯಾವುದೇ ತೊಂದರೆಗಳಿಲ್ಲ. ವೈದ್ಯರ ನಿಗಾದೊಂದಿಗೆ ನಾನು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಮುನ್ನಚ್ಚೆರಿಕೆಯನ್ನು ಕೈಗೊಳ್ಳಬೇಕಾಗಿದ್ದು, ಕೊರೊನಾ ಪರೀಕ್ಷೆಗೆ ಒಳಪಡಬೇಕು' ಎಂದು ವಿನಂತಿಸಿದ್ದಾರೆ.
ಇದೇ ತಿಂಗಳಾರಂಭದಲ್ಲಿ (ಮಾರ್ಚ್ 10) ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ತೀರತ್ ಸಿಂಗ್ ರಾವತ್ ಪದಗ್ರಹಣ ಮಾಡಿದ್ದರು. ಹರಿದ ಜೀನ್ಸ್ ಬಟ್ಟೆಯನ್ನು ಮಹಿಳೆಯರು ಧರಿಸುವುದರಿಂದ ಮಕ್ಕಳ ಮೇಲೆ ಪರಿಣಾಮ ಉಂಟಾಗುತ್ತದೆ ಎಂಬ ಅವರ ಹೇಳಿಕೆಯು ವಿವಾದಕ್ಕೀಡಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.