ನವದೆಹಲಿ: ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಮಂದಿ ಕಾರ್ಮಿಕರ ರಕ್ಷಣೆಗಾಗಿ ಬುಧವಾರವೂ ಕಾರ್ಯಾಚರಣೆ ಮುಂದುವರಿದಿದೆ.
6 ಇಂಚಿನ ಪೈಪ್ ಮೂಲಕ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಬೆಣ್ಣೆ ಚಪಾತಿ, ವೆಜ್ ಪುಲಾವ್ ಮತ್ತು ಮಟರ್ ಪನೀರ್‌ನಂತಹ ಬೇಯಿಸಿದ ಆಹಾರ ಪದಾರ್ಥಗಳನ್ನು ರವಾನಿಸಲಾಗುತ್ತಿದೆ.
ನಾವು ಸುರಂಗದೊಳಗೆ ಸಿಲುಕಿರುವ ಕಾರ್ಮಿಕರಿಗಾಗಿ ವೆಜ್ ಪುಲಾವ್, ಮಟರ್ ಪನೀರ್ ಮತ್ತು ಬೆಣ್ಣೆ ಚಪಾತಿ ತಯಾರಿಸಿದ್ದು, ಪೈಪ್ ಮೂಲಕ ಆಹಾರವನ್ನು ಪೂರೈಸುತ್ತಿದ್ದೇವೆ ಎಂದು ಬಾಣಸಿಗ ಸಂಜೀತ್ ರಾಣಾ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಎನ್ಎಚ್ಐಡಿಸಿಎಲ್) ನಿರ್ದೇಶಕ ಅಂಶು ಮನೀಶ್ ಕಲ್ಖೋ ಮಾತನಾಡಿ, 6 ಇಂಚಿನ ಪೈಪ್‌ನಲ್ಲಿ ಸಿಲಿಂಡರ್ ಆಕಾರದ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಖಿಚಡಿ ಮತ್ತು ದಾಲಿಯಾವನ್ನು ಪೂರೈಸಲು ಪ್ರಯತ್ನಿಸಲಾಯಿತು. ಆದರೆ, ಅದು ಸಾಧ್ಯವಾಗಲಿಲ್ಲ. ಬಳಿಕ ಇತರೆ ಪದಾರ್ಥಗಳು ಸೇರಿದಂತೆ ಕಿತ್ತಳೆ, ಬಾಳೆಹಣ್ಣು ಮತ್ತು ಅಗತ್ಯ ಔಷಧಗಳನ್ನು ಪೂರೈಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.
ಸದ್ಯ ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಐಟಿಬಿಪಿ, ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಕಾರ್ಮಿಕರ ರಕ್ಷಣೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.