ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ನವೆಂಬರ್ 12ರಿಂದ ಸಿಲುಕಿದ್ದ 41 ಕಾರ್ಮಿಕರನ್ನು ಕೊನೆಗೂ ಯಶಸ್ವಿಯಾಗಿ ಹೊರಗೆ ಕರೆತರಲಾಗಿದೆ. ಜ. 12ರಂದು ಉತ್ತರಕಾಶಿಯ ಸಿಲ್ಕ್ಯಾರಾದಿಂದ ದಾಂಡಲಗಾವ್ ಎಂಬಲ್ಲಿಗೆ ಸಂಪರ್ಕ ಕಲ್ಪಿಸುವ ಸುರಂಗ ಕುಸಿದಿತ್ತು. ಅಂತರರಾಷ್ಟ್ರೀಯ ಸುರಂಗ ತಜ್ಞ ಕ್ರಿಸ್ ಕೂಪರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಹಲವು ಬಾರಿ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಕೊನೆಗೆ ಬಿಲ ಗಣಿಗಾರಿಕೆ ತಂತ್ರಜ್ಞಾನ ಬಳಸಿ ಸುರಂಗ ನಿರ್ಮಾಣ ಮಾಡಲಾಗಿದ್ದು, ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆ ತರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.