ADVERTISEMENT

ಗ್ರಾಹಕ ನ್ಯಾಯಾಲಯಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ‘ಸುಪ್ರೀಂ’ ಸೂಚನೆ

ಪಿಟಿಐ
Published 1 ಡಿಸೆಂಬರ್ 2021, 16:22 IST
Last Updated 1 ಡಿಸೆಂಬರ್ 2021, 16:22 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಸುಪ್ರೀಂಕೋರ್ಟ್‌ ಬುಧವಾರ ಸೂಚಿಸಿದೆ.

ಈ ಸಂಬಂಧ ನ್ಯಾಯಾಲಯ ನೀಡಿರುವ ಆದೇಶಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಿ, ಇಲ್ಲದಿದ್ದರೆ ಬರುವ ದಿನಗಳಲ್ಲಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್‌ ಜಾರಿ ಮಾಡಲಾಗುವುದು ಎಂದೂ ಸುಪ್ರೀಂಕೋರ್ಟ್‌ ಎಚ್ಚರಿಕೆ ನೀಡಿತು.

ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌, ಎಂ.ಎಂ.ಸುಂದರೇಶ್ ಅವರಿದ್ದ ನ್ಯಾಯಪೀಠ, ಈ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ನಡೆಸಿತು.

ADVERTISEMENT

ಗ್ರಾಹಕರ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಅನುದಾನ ನೀಡಿದೆ. ಒಂದು ವೇಳೆ ರಾಜ್ಯಗಳು ತಮ್ಮ ಪಾಲಿನ ಹಣವನ್ನು ನೀಡದಿದ್ದರೆ, ಈ ಅನುದಾನ ವಾಪಸ್ ಹೋಗುವ ಸಾಧ್ಯತೆ ಇದೆ ಎಂದೂ ನ್ಯಾಯಪೀಠ ಎಚ್ಚರಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.