ವಾರಾಣಸಿ (ಉತ್ತರಪ್ರದೇಶ): ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಾಣಸಿ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ (ಎಎಸ್‌ಐ) ಇಲಾಖೆಗೆ ಗುರುವಾರ ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಅಲ್ಲದೆ ಮತ್ತೆ ಕಾಲಾವಕಾಶ ವಿಸ್ತರಿಸುವುದಿಲ್ಲ ಎಂದೂ ಹೇಳಿದೆ.
ಎಎಸ್‌ಐ ಸಲ್ಲಿಸಿದ ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಸದ್ಯ ಕೈಗೊಂಡಿರುವ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಮಯ ವಿಸ್ತರಿಸುವಂತೆ ಸರ್ಕಾರಿ ವಕೀಲ ರಾಜೇಶ್ ಮಿಶ್ರಾ ಮನವಿ ಸಲ್ಲಿಸಿದರು. ಇದನ್ನು ಜಿಲ್ಲಾ ನ್ಯಾಯಾಧೀಶ ಎ.ಕೆ. ವಿಶ್ವೇಶ್ ಅವರು ಮಾನ್ಯ ಮಾಡಿದರು. ಅ. 6ರೊಳಗೆ ಸಮೀಕ್ಷೆಯ ವರದಿ ಸಲ್ಲಿಸಬೇಕಿದ್ದ ಎಎಸ್‌ಐಗೆ ಈಗ ನ. 6ರವರೆಗೆ ಕಾಲಾವಕಾಶ ಸಿಕ್ಕಂತಾಗಿದೆ.
ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ 17ನೇ ಶತಮಾನದ ಈ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂಬುದನ್ನು ನಿರ್ಧರಿಸಲು ಎಎಸ್‌ಐ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.