ADVERTISEMENT

ಜ್ಞಾನವಾಪಿ ಮಸೀದಿ: ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಇಲ್ಲ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2022, 19:30 IST
Last Updated 14 ಅಕ್ಟೋಬರ್ 2022, 19:30 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಲಖನೌ/ ವಾರಾಣಸಿ: ವಾರಾಣಸಿಯ ಕಾಶಿ ದೇವಾಲಯ ಸಂಕೀರ್ಣದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗ ರೂಪದ ರಚನೆಯ ಕಾರ್ಬನ್‌ ಡೇಟಿಂಗ್‌ ಪರೀಕ್ಷೆಗೆ ಅನುಮತಿ ನೀಡಲು ವಾರಾ ಣಸಿ ನ್ಯಾಯಾಲಯ ನಿರಾಕರಿಸಿದೆ.

ಈ ಸಂಬಂಧ ನಾಲ್ವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ನೂತನ ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ.

‘ಮಸೀದಿಯ ಆವರಣದಲ್ಲಿರುವ ನೀರಿನ ತೊಟ್ಟಿಯನ್ನು ರಕ್ಷಿಸುವಂತೆ ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲಿ ಸೂಚಿಸಿದೆ. ಕಾರ್ಬನ್‌ ಡೇಟಿಂಗ್‌ ಪರೀಕ್ಷೆಗೆ ಅವಕಾಶ ನೀಡಿದರೆ, ಆ ಜಾಗಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ಹಾಗೆ ಆದರೆ, ಅದು ಸುಪ್ರೀಂ ಕೋರ್ಟ್‌ನ ಸೂಚನೆಯ ಉಲ್ಲಂಘನೆಯಾಗುತ್ತದೆ. ಜತೆಗೆ ಅದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆಯೂ ಇದೆ’ ಎಂದು ವಾರಾಣಸಿ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್‌ ತೀರ್ಪು ನೀಡಿದ್ದಾರೆ.

ADVERTISEMENT

ಜ್ಞಾನವಾಪಿ ಮಸೀದಿಯಲ್ಲಿಪೂಜೆಗೆ ಅವಕಾಶ ನೀಡಬೇಕು’ ಎಂದು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ ಮೂಲ ಅರ್ಜಿಯು ಇನ್ನೂ ವಿಚಾರಣೆ ಹಂತದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.