ನವದೆಹಲಿ: ಸಾರ್ವಜನಿಕರು ಪ್ರಯಾಣಿಸುವ ವಾಹನಗಳಲ್ಲಿ ‘ವಾಹನ ಇರುವ ಸ್ಥಳ ಟ್ರ್ಯಾಕಿಂಗ್’ (ವಿಎಲ್‌ಟಿ) ಮತ್ತು ತುರ್ತು ಸಂದರ್ಭಗಳಲ್ಲಿ ಸಂದೇಶ ರವಾನಿಸುವ ಸಾಧನ ಅಳವಡಿಸುವುದು ಕಡ್ಡಾಯ ಎಂದು ಕೇಂದ್ರ ಭೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯ ಹೇಳಿದೆ.
ಮುಂದಿನ ಜನವರಿ 1ರ ನಂತರ ನೋಂದಣಿ ಮಾಡಿಸುವ ವಾಹನಗಳಿಗೆ ಈ ನಿಯಮ ಅನ್ವಯ ಎಂದು ಸಚಿವಾಲಯ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಧನ ಅಳವಡಿಸಿದ ಕುರಿತು ಹಾಗೂ ಅದರಲ್ಲಿ ದಾಖಲಾದ ಮಾಹಿತಿಯನ್ನು ಸಚಿವಾಲಯಕ್ಕೆ ಸಲ್ಲಿಸಬೇಕು. ಆಟೊ ಮತ್ತು ಇ–ರಿಕ್ಷಾಗಳಿಗೆ ಈ ನಿಯಮ ಅನ್ವಯವಾಗದು ಎಂದೂ ಪ್ರಕಟಣೆ ತಿಳಿಸಿದೆ.
ಪ್ರಯಾಣಿಕರು, ಅದರಲ್ಲೂ ಮಹಿಳೆಯರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.