ಮುಂಬೈ: ಸಂಪೂರ್ಣವಾಗಿ ಎಥೆನಾಲ್‌ನಿಂದ ಚಲಿಸುವ ನೂತನ ವಾಹನಗಳನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.
ಬರುವ ಆಗಸ್ಟ್ ತಿಂಗಳಲ್ಲಿ ಸಂಪೂರ್ಣವಾಗಿ ಎಥೆನಾಲ್‌ನಿಂದ ಚಲಿಸುವ ವಾಹನಗಳನ್ನು ಬಿಡುಗಡೆ ಮಾಡಲಾಗುವುದು. ಬಜಾಜ್, ಟಿವಿಎಸ್ ಮತ್ತು ಹೀರೊ ಕಂಪನಿಯ ಬೈಕ್ ಮತ್ತು ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಾಗುವುದು. ಇವು ಶೇ. 100ರಷ್ಟು ಎಥೆನಾಲ್‌ನಲ್ಲೇ ಚಲಿಸುತ್ತವೆ ಎಂದರು.
ಇನ್ನು ಮುಂದೆ ನಾವು ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ತಯಾರಿಸುತ್ತೇವೆ ಎಂದು ಹೇಳಿದರು.
ಟೊಯೊಟೊ ಕಂಪನಿಯು ಶೇ 60ರಷ್ಟು ಎಥೆನಾಲ್ ಹಾಗೂ ಶೇ 40ರಷ್ಟು ಎಲೆಕ್ಟ್ರಿಕ್‌ನೊಂದಿಗೆ ಚಲಿಸುವ ವಾಹನವನ್ನು ಬಿಡುಗಡೆ ಮಾಡಲಿದೆ ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.