ನವದೆಹಲಿ : ಮಾಜಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಸುಲಭ್ ಇಂಟರ್ ನ್ಯಾಷನಲ್‌ನ ಸಂಸ್ಥಾಪಕ ಬಿಂದೇಶ್ವರ ಪಾಠಕ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರಿಗೆ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮ’ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಬಿಂದೇಶ್ವರ ಪಾಠಕ್ ಅವರಿಗೆ ಮರಣೋತ್ತರವಾಗಿ ಹಾಗೂ ಭರತನಾಟ್ಯ ಕಲಾವಿದೆ ಪದ್ಮಾ ಸುಬ್ರಹ್ಮಣ್ಯಂ, ವೆಂಕಯ್ಯ ನಾಯ್ಡು ಅವರಿಗೆ ಪದ್ಮವಿಭೂಷಣ ಪ್ರದಾನ ಮಾಡಲಾಯಿತು.
ನಟ ಮಿಥುನ್ ಚಕ್ರವರ್ತಿ, ಗಾಯಕಿ ಉಷಾ ಉತ್ಥುಪ್, ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ರಾಮ ನಾಯೀಕ ಹಾಗೂ ಕೈಗಾರಿಕೋದ್ಯಮಿ ಸತೀಶ್ ಜಿಂದಾಲ್ ಅವರಿಗೆ ಪದ್ಮಭೂಷಣ ಪುರಸ್ಕಾರವನ್ನು ರಾಷ್ಟ್ರಪತಿ ಪ್ರದಾನ ಮಾಡಿದರು.
ಉಪ ರಾಷ್ಟ್ರಪತಿ ಜಗದೀಪ ಧನಕರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.