ನವದೆಹಲಿ: ‘ನ್ಯಾಯಾಲಯ ನೀಡುವ ತೀರ್ಪಿನವರೆಗೆ ಕಾಯಲು ಹಿಂದೂಗಳು ಸಿದ್ಧರಿಲ್ಲ. ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರವೇ ಕಾಯ್ದೆ ರೂಪಿಸಬೇಕು’ ಎಂದು ವಿಶ್ವಹಿಂದೂ ಪರಿಷತ್ (ವಿಎಚ್‌ಪಿ) ಆಗ್ರಹಿಸಿದೆ.
ಅಯೋಧ್ಯೆ ಪ್ರಕರಣದಲ್ಲಿ ನ್ಯಾಯಾಲಯದ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಗೆ ವಿಎಚ್‌ಪಿ ಈ ಪ್ರತಿಕ್ರಿಯೆ ನೀಡಿದೆ.
‘ಕಾಯ್ದೆ ಜಾರಿಗೊಳಸುವ ಮೂಲಕ ರಾಮಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ದಾರಿ ಸುಗಮ ಮಾಡಿಕೊಡಬೇಕು’ ಎಂದು ವಿಎಚ್‌ಪಿ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.
ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸುವಂತೆ ಹಿಂದೂ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದವು. ‘ಅಯೋಧ್ಯೆ ಕುರಿತಂತೆ ಸರ್ಕಾರ ನೀಡಿದ್ದ ಭರವಸೆ ಈಡೇರಿಸಲು ಎಲ್ಲ ಪ್ರಯತ್ನ ಮಾಡುವುದಾಗಿ ಮೋದಿ ಅವರು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.