ನವದೆಹಲಿ: ‘ರಾಜಕೀಯ ಪಕ್ಷಗಳು, ಉದ್ದಿಮೆದಾರರು ತಮ್ಮದೇ ಆದ ಪತ್ರಿಕೆಗಳನ್ನು ಮತ್ತು ಸುದ್ದಿ ವಾಹಿನಿಗಳನ್ನು ಪ್ರಾರಂಭಿಸುತ್ತಿದ್ದಾರೆ. ಇದರಿಂದ ಪಟ್ಟಭದ್ರ ಹಿತಾಸಕ್ತಿಗಳನ್ನು ಉತ್ತೇಜಿಸುವ ಮತ್ತು ಪತ್ರಿಕೋದ್ಯಮದ ಮೌಲ್ಯಗಳನ್ನು ರಾಜಿ ಮಾಡಿಕೊಳ್ಳುತ್ತಿವೆ’ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದರು.
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ರಾಷ್ಟ್ರೀಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ರಾಜಕೀಯ ಪಕ್ಷವೊಂದು ಪತ್ರಿಕೆ ನಡೆಸುತ್ತಿದ್ದರೆ, ಅದನ್ನು ಸ್ಪಷ್ಟವಾಗಿ ತಿಳಿಸಬೇಕು' ಎಂದು ಹೇಳಿದ ಅವರು, ‘ಸಂವೇದನಾಶೀಲ ಸುದ್ದಿ ನೀಡುವ ಸಂದರ್ಭದಲ್ಲಿ ಪತ್ರಕರ್ತರು ಎಚ್ಚರಿಕೆಯಿಂದ ವರ್ತಿಸಬೇಕು. ಈಗಿನ ಸಂದರ್ಭದಲ್ಲಿ ಸಂವೇದನಾಶೀಲ ಸುದ್ದಿ ಎಂದರೆ ಅರ್ಥವಿಲ್ಲದ ಸುದ್ದಿ ಎಂಬಂತಾಗಿದೆ’ ಎಂದರು.
‘ಪತ್ರಿಕಾ ಸ್ವಾತಂತ್ರ್ಯ ಮತ್ತು ಅದರ ಜವಾಬ್ದಾರಿ ಏನೆಂಬುವುದನ್ನು ಅರ್ಥ ಮಾಡಿಕೊಳ್ಳುವ ದಿನ ಇದು. ಕಾಸಿಗಾಗಿ ಸುದ್ದಿಗಳಿಗಿಂತ ನಕಲಿ ಸುದ್ದಿಗಳು ದೊಡ್ಡ ಬಿಕ್ಕಟ್ಟು ಸೃಷ್ಟಿಸುತ್ತವೆ’ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.