ನವದೆಹಲಿ: ಹೊಸ ಶೈಕ್ಷಣಿಕ ವರ್ಷದಿಂದ ದೇಶದ ಎಂಟು ರಾಜ್ಯಗಳಲ್ಲಿರುವ 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವ ಅಖಿಲ ಭಾರತ ತಾಂತ್ರಿಕ ಮಂಡಳಿ ನಿರ್ಧಾರವನ್ನು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸ್ವಾಗತಿಸಿದ್ದಾರೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ವೆಂಕಯ್ಯ ನಾಯ್ಡು ಅವರು, ’ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿ, ಬಿ.ಟೆಕ್ ಪದವಿಯಲ್ಲಿ, ಹಿಂದಿ, ಮರಾಠಿ, ತಮಿಳು, ತೆಲುಗು, ಕನ್ನಡ, ಗುಜರಾತಿ, ಮಲಯಾಳಂ, ಬೆಂಗಾಲಿ, ಅಸ್ಸಾಮಿ,ಪಂಜಾಬಿ ಮತ್ತು ಒಡಿಯಾ ಭಾಷೆಗಳಲ್ಲಿ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅನುಮತಿ ನೀಡಿದೆ. ಇದನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ’ ಎಂದು ಹೇಳಿದ್ದಾಗಿ, ಉಪರಾಷ್ಟ್ರಪತಿಯವರ ಕಾರ್ಯಾಲಯ ಟ್ವೀಟ್ ಮಾಡಿದೆ.
’ಇನ್ನೂ ಹೆಚ್ಚಿನ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಇತರ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್‌ಗಳನ್ನು ಆಯ್ಕೆ ಮಾಡಲು ಅವಕಾಶಕಲ್ಪಿಸಬೇಕು ಎಂದು ವೆಂಕಯ್ಯನಾಯ್ಡು ಅವರು ಆಶಿಸಿದ್ದಾರೆ’ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.