ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ನಾವೆಲ್ಲರೂ ಹೋಗುತ್ತಿದ್ದೆವು’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಧಾರ್ಮಿಕ ಕಾರ್ಯಕ್ರಮವಾಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು’ ಎಂದೂ ಹೇಳಿದ ಅವರು ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು. ಈ ಬಗ್ಗೆ ನಮಗೆ ಮಾಹಿತಿ ಬರುತ್ತಿದೆ. ಮಾಹಿತಿ ಇದ್ದೇ ಹೇಳುತ್ತಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.