ADVERTISEMENT

ವಿಡಿಯೊ: ಮಹಾರಾಷ್ಟ್ರದಲ್ಲಿ ಉಕ್ಕಿ ಹರಿಯುವ ನದಿಗೆ ಧುಮುಕಿದ ಯುವಕ, ಮುಂದೇನಾಯ್ತು?

​ಪ್ರಜಾವಾಣಿ ವಾರ್ತೆ
Published 15 ಜುಲೈ 2022, 6:20 IST
Last Updated 15 ಜುಲೈ 2022, 6:20 IST
ಯುವಕ ನದಿಗೆ ಧುಮುಕುತ್ತಿರುವ ದೃಶ್ಯ (ಟ್ವಿಟರ್ ಚಿತ್ರ)
ಯುವಕ ನದಿಗೆ ಧುಮುಕುತ್ತಿರುವ ದೃಶ್ಯ (ಟ್ವಿಟರ್ ಚಿತ್ರ)   

ಮುಂಬೈ: ಯುವಕನೊಬ್ಬ ಉಕ್ಕಿ ಹರಿಯುತ್ತಿರುವ ನದಿಗೆ ಹಾರಿ ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ನಡೆದಿದೆ.

ಯುವಕ ನದಿಗೆ ಧುಮುಕುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

23 ವರ್ಷದ ಯುವಕ ‘ನಯೀಮ್ ಅಮೀನ್’ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ವಿಪತ್ತು ನಿರ್ವಹಣಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ADVERTISEMENT

ಗುರುವಾರ ತಡರಾತ್ರಿಯವರೆಗೂ ನಯೀಮ್‌ಗಾಗಿ ಹುಡುಕಾಟ ನಡೆಸಲಾಯಿತು. ಆದರೆ, ಆತ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹಲವು ನದಿಗಳು ನದಿಗಳು ಉಕ್ಕಿ ಹರಿಯುತ್ತಿವೆ.

ಪುಣೆ, ನಾಸಿಕ್ ಸೇರಿದಂತೆ 3 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಾಲ್ಘರ್‌‌ ಜಿಲ್ಲೆಯ ವಸಯಿ ಪಟ್ಟಣದಲ್ಲಿ ಬುಧವಾರ ಸಂಭವಿಸಿದ ಭೂಕುಸಿತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಅಲ್ಲದೆ, ಗೊಂಡಿಯಾ ಜಿಲ್ಲೆಯಲ್ಲಿ ನಾಲ್ವರು ಪ್ರವಾಹಕ್ಕೆ ಕೊಚ್ಚಿ ಹೋಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.