ಮುಂಬೈ:ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡದೆ ವಿದೇಶದಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯರನ್ನು ಇಲ್ಲಿನ ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್‌ಎ) ನ್ಯಾಯಾಲಯ‘ದೇಶಭ್ರಷ್ಟ ಆರ್ಥಿಕ ಅಪರಾಧಿ’ ಎಂದು ಘೋಷಿಸಿದೆ.
ಇದರೊಂದಿಗೆ, ‘ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ’ ಜಾರಿಗೊಂಡ ಬಳಿಕ ಹಾಗೆ ಘೋಷಿಸಲಾದ ಮೊದಲ ಉದ್ಯಮಿಯಾಗಿದ್ದಾರೆ ಮಲ್ಯ. ಕಳೆದ ವರ್ಷದ ಆಗಸ್ಟ್‌ನಲ್ಲಿ ಕಾಯ್ದೆ ಜಾರಿಗೆ ಬಂದಿತ್ತು.
ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಣೆ ಮಾಡಿರುವುದರಿಂದ ಪ್ರಕರಣದ ತನಿಖೆ ನಡೆಸುತ್ತಿರುವ ಸಂಸ್ಥೆಗೆ ಮಲ್ಯ ಆಸ್ತಿ, ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ದೊರೆತಿದೆ.ಮಲ್ಯ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಿಸುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) 2018ರ ನವೆಂಬರ್‌ನಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.
ಇನ್ನಷ್ಟು ಸುದ್ದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.