ADVERTISEMENT

’ಲವ್‌ ಜಿಹಾದ್‌’ ವಿರುದ್ಧ ಕಠಿಣ ಕಾನೂನು ಕ್ರಮ: ಗುಜರಾತ್ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2021, 2:47 IST
Last Updated 11 ಸೆಪ್ಟೆಂಬರ್ 2021, 2:47 IST
ವಿಜಯ್‌ ರೂಪಾನಿ
ವಿಜಯ್‌ ರೂಪಾನಿ   

ಅಹಮದಾಬಾದ್‌: ’ಲವ್ ಜಿಹಾದ್‌’ವಿರುದ್ಧಗುಜರಾತ್‌ ಸರ್ಕಾರ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ವಿಜಯ್‌ ರೂಪಾನಿ ತಿಳಿಸಿದ್ದಾರೆ.

ಪಶಸಂಗೋಪನೆ ವೃತ್ತಿಯಲ್ಲಿ ತೊಡಗಿರುವ ಮಲ್ದಾರಿ ಸಮುದಾಯದವರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು ಗೋಹತ್ಯೆಯಲ್ಲಿ ತೊಡಗಿರುವವರ ವಿರುದ್ಧವು ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದರು

ಹಿಂದೂ ಸಮುದಾಯದ ಹೆಣ್ಣು ಮಕ್ಕಳನ್ನು ಬಲೆಗೆಬೀಳಿಸಿಕೊಳ್ಳುವವರು, ಅವರನ್ನು ಕರೆದುಕೊಂಡು ಹೋಗುವವರ ವಿರುದ್ಧಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ವಿಜಯ್‌ ರೂಪಾನಿ ಹೇಳಿದರು.

ADVERTISEMENT

ಭೂಗಳ್ಳರು, ಸರಗಳ್ಳರ ವಿರುದ್ಧವು ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಕೈಕೊಳ್ಳಲಿದೆ ಎಂದು ರೂಪಾನಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.