ನವದೆಹಲಿ: ಚಂದ್ರಯಾನ–2ನ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದಿರುವುದನ್ನು ಆರ್ಬಿಟರ್ ಪತ್ತೆ ಹಚ್ಚಿದೆ. ಲ್ಯಾಂಡರ್ ಜತೆಗೆ ಸಂಪರ್ಕ ಸಾಧಿಸುವ ಪ್ರಯತ್ನ ಮುಂದುವರಿದಿದೆ ಎಂದು ಭಾರತೀಯ ಬಾಹ್ಯಾಕಾಶ ಅಧ್ಯಯನ ಸಂಸ್ಥೆ ಇಸ್ರೋ ಮಂಗಳವಾರ ಮತ್ತೊಮ್ಮೆ ತಿಳಿಸಿದೆ.
ವಿಕ್ರಮ್ ಲ್ಯಾಂಡರ್‌ಚಂದ್ರನ ಮೇಲೆ ಇಳಿದಿರುವುದಾಗಿ ಇಸ್ರೋ ಮುಖ್ಯಸ್ಥ ಕೆ. ಶಿವನ್ ಅವರು ಈಗಾಗಲೇ ತಿಳಿಸಿದ್ದಾರೆ. ಅಲ್ಲದೆ, ಅದರ ಜೊತೆಗೆ ಸಂಪರ್ಕ ಸಾಧಿಸುವ ಪ್ರಯತ್ನಗಳು ನಡಯುತ್ತಿವೆ ಎಂದೂ ಅವರು ತಿಳಿಸಿದ್ದರು. ಈ ಮಧ್ಯೆ ಮಂಗಳವಾರ ಟ್ವೀಟ್ ಮಾಡಿರುವ ಇಸ್ರೋ, ಮತ್ತೊಮ್ಮೆ ಈ ಸಂಗತಿಯನ್ನು ಸ್ಪಷ್ಟಪಡಿಸಿದೆ.
ಲ್ಯಾಂಡರ್ ಜೊತೆಗೆ ಸಂಪರ್ಕ ಬೆಸೆಯಲು ನಮಗೆ ಇನ್ನು ಸಾಧ್ಯವಾಗಿಲ್ಲ. ಆದರೆ, ಸಂಪರ್ಕ ಸಾಧಿಸಲು ಮಾಡಬೇಕಾದ ಎಲ್ಲ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.