ನವದೆಹಲಿ: 2047ರ ವಿಕಸಿತ ಭಾರತದ ಪರಿಕಲ್ಪನೆಯಡಿ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ಪ್ರತಿಯೊಬ್ಬ ಭಾರತೀಯರ ಮಹಾತ್ವಾಕಾಂಕ್ಷೆಯಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳು ಜನರ ನಡುವೆ ಸಮನ್ವಯತೆ ಸಾಧಿಸಿ, ಈ ಉದ್ದೇಶವನ್ನು ಯಶಸ್ವಿಗೊಳಿಸಲು ಸಹಕಾರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.
ಈ ಸಂಬಂಧ ‘ಎಕ್ಸ್‘ನಲ್ಲಿ ನೀತಿ ಆಯೋಗ ಪೋಸ್ಟ್ ಮಾಡಿ, ಮಾಹಿತಿ ಹಂಚಿಕೊಂಡಿದೆ.
ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಗುರಿಯೊಂದಿಗೆ ನೀತಿ ಆಯೋಗ ಸಭೆಯ ಅಧ್ಯಕ್ಷತೆ ವಹಿಸಿ ಪ್ರಧಾನಿ ಮೋದಿ ಅವರು ಮಾತನಾಡಿದರು. ಈ ವೇಳೆ ಎಲ್ಲಾ ರಾಜ್ಯಗಳು ವಿಕಸಿತ ಭಾರತ ನಿರ್ಮಾಣ ಮಾಡಲು ಜನರೊಂದಿಗೆ ಸಹಕಾರಿಸಬೇಕು. ಆ ನಿಟ್ಟಿನಲ್ಲಿ ಕಾರ್ಯಕ್ರಮಗಳು, ಯೋಜನೆಗಳನ್ನು ಜಾರಿಗೊಳಿಸಬೇಕು. ಗ್ರಾಮೀಣ ಮತ್ತು ನಗರ ಜನರ ಜೀವನಮಟ್ಟವನ್ನು ಹೆಚ್ಚಿಸಲು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯಗಳ ಸಹಭಾಗಿ ಆಡಳಿತವನ್ನು ಉತ್ತೇಜಿಸುವ ಮೂಲಕ ವಿಕಸಿತ ಭಾರತದ ಗುರಿಯನ್ನು ಸಾಧಿಸುವುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ
ನೀತಿ ಆಯೋಗದ ಮುಖ್ಯಸ್ಥರಾಗಿ ಪ್ರಧಾನಿ ಮಂತ್ರಿ ಇರುತ್ತಾರೆ. ಆಯೋಗದ ಆಡಳಿತ ಮಂಡಳಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಸಚಿವರು ಇರುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.