ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನ ಫೈನಲ್‌ನಲ್ಲಿ ಕುಸ್ತಿಪಟು ವಿನೇಶಾ ಫೋಗಟ್ ಅನರ್ಹತೆ ಹೊಂದಿರುವುದರಿಂದ ಕೋಟ್ಯಂತರ ಭಾರತೀಯರ ಭರವಸೆ ಕಮರಿದೆ. ಆದರೆ ಪೋಗಟ್ ಅವರು ಮತ್ತೆ ವಿಜಯದತ್ತ ಪುಟಿದೇಳುವುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.
ಈ ಸಂಬಂಧ ’ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಫೋಗಟ್ ವೃತಿಜೀವನದಲ್ಲಿ ಇದೊಂದು ದುರದೃಷ್ಟಕರ ಸಂಗತಿಯಾಗಿದೆ. ಆದರೆ ನನಗೆ ಸಂಪೂರ್ಣ ನಂಬಿಕೆ ಇದೆ. ಅವರು ಮತ್ತೊಮ್ಮೆ ಗೆಲುವಿನತ್ತ ಪುಟಿದೇಳುತ್ತಾರೆ. ನಮ್ಮ ಬೆಂಬಲ ಸದಾ ಅವರೊಂದಿಗೆ ಇರುತ್ತದೆ. ಅವರ ವೃತ್ತಿ ಜೀವನದಲ್ಲಿ ಅದ್ಭುತ ಯಶಸ್ಸು ಗಳಿಸಿದ್ದಾರೆ ಎಂದು ಹೇಳಿದ್ದಾರೆ.
ಮಹಿಳೆಯರ 50 ಕೆ.ಜಿ ಕುಸ್ತಿ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶಾ ಅವರನ್ನು 100 ಗ್ರಾಂ ಹೆಚ್ಚು ತೂಕ ಹೊಂದಿದ್ದಕ್ಕೆ ಒಲಿಂಪಿಕ್ಸ್ ಸಂಸ್ಥೆ ಅನರ್ಹಗೊಳಿಸಿದೆ.
ಮಂಗಳವಾರ ನಡೆದ 50 ಕೆ.ಜಿ ವಿಭಾಗದ ಮಹಿಳೆಯರ ಕುಸ್ತಿಯ ಸೆಮಿಫೈನಲ್‌ನಲ್ಲಿ ವಿನೇಶಾ 5–0 ಯಿಂದ ಕ್ಯೂಬಾದ ಯುಸೇನೆಯಲಿಸ್ ಗುಜ್ಮನ್ ಲೊಪೇಜ್ ವಿರುದ್ಧ ಗೆದ್ದಿದ್ದರು. ಇಂದು ರಾತ್ರಿ ನಡೆಯುವ ಫೈನಲ್ ಪಂದ್ಯದಲ್ಲಿ ಅಮೆರಿಕದ ಸೆರಾ ಹಿಲ್ದಿಬ್ರೇಟ್ ಅವರನ್ನು ವಿನೇಶಾ ಎದುರಿಸಬೇಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.