ADVERTISEMENT

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಮಕ್ಕಳ ಶಿಕ್ಷಣ ವೆಚ್ಚ ಭರಿಸುವೆ: ಸೆಹ್ವಾಗ್

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 16:10 IST
Last Updated 16 ಫೆಬ್ರುವರಿ 2019, 16:10 IST
ವಿರೇಂದ್ರ ಸೆಹ್ವಾಗ್
ವಿರೇಂದ್ರ ಸೆಹ್ವಾಗ್   

ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರ ಮಕ್ಕಳ ಶಿಕ್ಷಣ ವೆಚ್ಚವನ್ನು ಭರಿಸಲು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮುಂದೆ ಬಂದಿದ್ದಾರೆ.

ನಾವು ಅವರಿಗೆ ಎಷ್ಟು ಸಹಾಯ ಮಾಡಿದರೂ ಸಾಲುವುದಿಲ್ಲ. ಆದರೆ ಕಡೇ ಪಕ್ಷಪುಲ್ವಾಮದಲ್ಲಿ ಹುತಾತ್ಮರಾದ ಧೀರ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ನನ್ನಸೆಹ್ವಾಗ್ ಇಂಟರ್ ನ್ಯಾಷನಲ್ ಸ್ಕೂಲ್ ಭರಿಸಲು ಸಿದ್ಧವಿದೆ.ಇದಕ್ಕೆ ಅನುಮತಿ ನೀಡಿದರೆ ಅದೇ ನನ್ನ ಸೌಭಾಗ್ಯ ಎಂದು ಸೆಹ್ವಾಗ್ ಟ್ವೀಟಿಸಿದ್ದಾರೆ.

ಹರಿಯಾಣ ಪೊಲೀಸ್ ಪಡೆಯಲ್ಲಿರುವ ಬಾಕ್ಸರ್ ವಿಜೇಂದರ್ ಸಿಂಗ್, ಈ ತಿಂಗಳ ಸಂಬಳವನ್ನು ಹುತಾತ್ಮರ ಕುಟುಂಬಕ್ಕೆ ನೀಡುವುದಾಗಿ ಹೇಳಿದ್ದಾರೆ.

ADVERTISEMENT

ಪುಲ್ವಾಮ ದಾಳಿಯಲ್ಲಿ ಮಡಿದ ಯೋಧರ ಕುಟುಂಬಕ್ಕಾಗಿ ನಾನು ನನ್ನ ಒಂದು ತಿಂಗಳ ಸಂಬಳವನ್ನು ನೀಡುತ್ತೇನೆ.ಈ ಕುಟುಂಬಗಳಿಗೆ ಸಹಾಯ ಮಾಡಲು ಎಲ್ಲರೂ ಮುಂದೆ ಬರಬೇಕು.ಅವರ ಜತೆ ನಾವು ನಿಲ್ಲಬೇಕಾದುದು ನಮ್ಮ ಕರ್ತವ್ಯ, ಅವರ ಬಲಿದಾನದ ಬಗ್ಗೆ ಹೆಮ್ಮೆ ಪಡುವಂತಾಗಲಿ.ಜೈ ಹಿಂದ್ ಎಂದು ವಿಜೇಂದರ್ ಸಿಂಗ್ ಟ್ವೀಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.