ADVERTISEMENT

ಛತ್ತೀಸಗಢ: ವಿಷ್ಣುದೇವ್ ಸಾಯ್‌ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ಇಂದು

ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಷ್ಣುದೇವ್‌ ಸಾಯ್‌.

ಪಿಟಿಐ
Published 14 ಡಿಸೆಂಬರ್ 2023, 4:25 IST
Last Updated 14 ಡಿಸೆಂಬರ್ 2023, 4:25 IST
<div class="paragraphs"><p>ಛತ್ತೀಸಗಢ ಸಿಎಂ ವಿಷ್ಣುದೇವ್ ಸಾಯ್‌</p></div>

ಛತ್ತೀಸಗಢ ಸಿಎಂ ವಿಷ್ಣುದೇವ್ ಸಾಯ್‌

   

(ಚಿತ್ರ ಕೃಪೆ– ಪಿಟಿಐ)

ರಾಯಪುರ: ಛತ್ತೀಸಗಢದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ಇಂದು ನಡೆಯಲಿದೆ ಎಂದು ಮುಖ್ಯಮಂತ್ರಿ ವಿಷ್ಣುದೇವ್ ಸಾಯ್‌ ತಿಳಿಸಿದ್ದಾರೆ.

ADVERTISEMENT

ಸಾಯ್‌ ಅವರು ಮುಖ್ಯಮಂತ್ರಿಯಾಗಿ ಹಾಗೂ ವಿಜಯ್ ಶರ್ಮಾ ಉಪಮುಖ್ಯಮಂತ್ರಿಯಾಗಿ ಬುಧವಾರ(ಡಿ.13) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ರಾಮದಾಸ್ ಅಠಾವಳೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಹಲವು ಪಕ್ಷದ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಾಯ್‌, 'ಗುರುವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಎಲ್ಲ ಇಲಾಖೆಗಳ ಕಾರ್ಯದರ್ಶಿಗಳ ಪರಿಚಯ ಕಾರ್ಯಕ್ರಮವೂ ನಡೆಯಲಿದೆ. ನಂತರ ಪತ್ರಿಕಾಗೋಷ್ಠಿ ನಡೆಸಲಾಗುವುದು' ಎಂದು ಮಾಹಿತಿ ನೀಡಿದ್ದಾರೆ.

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆ ಜಾರಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.